13 days manufacturing training of jute products in Hosahalli..!

ಹೊಸಹಳ್ಳಿಯಲ್ಲಿ 13 ದಿನಗಳ ಜೂಟ್‌ ಉತ್ಪನ್ನಗಳ ತಯಾರಿಕಾ ತರಬೇತಿ..!

ದೊಡ್ಡಬಳ್ಳಾಪುರ (Doddaballapura); ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಹಕಾರ ನೀಡುತ್ತವೆ ಇಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ಹಾಗೂ ರುಡ್‌ಸೆಟ್‌ ಸಂಸ್ಥೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ 13 ದಿನಗಳ ಜೂಟ್‌ ಉತ್ಪನ್ನಗಳ ತಯಾರಿಕಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜೂಟ್‌ ಉತ್ಪನ್ನಗಳು ಬಹುಬೇಡಿಕೆಯನ್ನು ಹೊಂದಿದ್ದು, ಪ್ಲಾಸ್ಟಿಕ್‌ ಮುಕ್ತ ಪರಿಸರಕ್ಕೆ ಇದು ಕೈಜೋಡಿಸಲಿದೆ. ಅಂತೆಯೇ ಇದು ಪರಿಸರಸ್ನೇಹಿಯಾಗಿದ್ದು, ದಿನನಿತ್ಯದ ಬಳಕೆಗೆ ವಿವಿಧ ಮಾದರಿಗಳ ಜೂಟ್‌ ಆಧಾರಿತ ಉತ್ಪನ್ನಗಳನ್ನು ಬಳಸಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ವಿಭಾಗದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ ಅವರು ಮಾತನಾಡಿ, ತರಬೇತಿ ಪೂರ್ಣಗೊಳಿಸಿರುವ ಎಲ್ಲಾ ಮಹಿಳೆಯರು ತಮ್ಮ ಮನೆಗಳಲ್ಲಿ ವೈಯಕ್ತಿಕವಾಗಿ ಅಥವಾ ಗುಂಪು ಚಟುವಟಿಕೆಗಳ ಮೂಲಕ ಜೂಟ್‌ ಆಧಾರಿತ ಉತ್ಪನ್ನ ತಯಾರಿಸಿ, ಆದಾಯ ಹೊಂದಬಹುದು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯುವ ಮಾಸಿಕ ಸಂತೆಗಳು, ವ್ಯಾಪಾರ ಮೇಳಗಳಲ್ಲಿ ಜೂಟ್‌ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಮಾತನಾಡಿ, ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ತರಬೇತಿ ಮೂಲಕ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು‌.

ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಹಾಗೂ ಹೊಸಹಳ್ಳಿ ಗ್ರಾಮ ಪಂಚಾಯಿತಿಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿನಿಧಿಗಳು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ವಿದ್ಯಾ ಹೊಸಮನಿ ಸೇರಿದಂತೆ ಜೂಟ್‌ ಉತ್ಪನ್ನ ತಯಾರಿಕಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!