Vijnatham 2025: Avadheshananda Giri Maharaja felicitated

ವಿಜ್ಞಾತಂ 2025: ಅವಧೇಶಾನಂದ ಗಿರಿ ಮಹಾರಾಜರಿಗೆ ಗೌರವ ಪುರಸ್ಕಾರ

ಮಂಡ್ಯ (Vignatham 2025): ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾ ಭವನದಲ್ಲಿ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ (Nirmalanandanatha Swamiji) 12ನೇ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ, ಪಟ್ಟಾಭಿಷೇಕ ಮಹೋತ್ಸವ ಮತ್ತು ವಿಜ್ಞಾತಂ ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಯಿತು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಪ್ರತಿವರ್ಷವೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ‘ಚುಂಚಶ್ರೀ’ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಅದೇ ರೀತಿ, ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸಲು ‘ವಿಜ್ಞಾತಂ’ ಪ್ರಶಸ್ತಿ (vignatam award) ನೀಡಲಾಗುತ್ತದೆ.

2025ನೇ ಸಾಲಿನ ವಿಜ್ಞಾತಂ ಪ್ರಶಸ್ತಿಗೆ (Vignatam award) ಹರಿದ್ವಾರದ ಹರಿಹರ ಆಶ್ರಮ, ಜುನಾ ಅಖಾಡಾದ ಆಚಾರ್ಯ ಮಹಾಮಂಡಲೇಶ್ವರರಾದ ಪರಮಪೂಜ್ಯ ಶ್ರೀ ಅವಧೇಶಾನಂದ ಗಿರಿ ಮಹಾರಾಜ್ ಅವರು ಭಾಜನರಾದರು.

ಶ್ರೀ ಸ್ವಾಮಿ ಅವಧೇಶಾನಂದ ಗಿರಿ ಮಹಾರಾಜರು ಆಧ್ಯಾತ್ಮಿಕ ಸಂತರೂ, ತತ್ವಜ್ಞಾನಿಗಳೂ, ಮತ್ತು ಸಮಾಜ ಸುಧಾರಕರಾಗಿದ್ದಾರೆ. ತನ್ನ 17ನೇ ವಯಸ್ಸಿನಲ್ಲಿ ಆಧ್ಯಾತ್ಮಿಕ ಜ್ಞಾನವನ್ನು ಅರಸುತ್ತಾ ಪರಿವ್ರಾಜಕರಾದರು. 1985ರಲ್ಲಿ ಅವರು ಸ್ವಾಮಿ ಸತ್ಯಮಿತ್ರಾನಂದಗಿರಿ ಅವರ ಶಿಷ್ಯರಾದರು.

ಬಳಿಕ, ಸ್ವಾಮಿ ಅವಧೇಶಾನಂದಗಿರಿ ಎಂಬ ಅಭಿದಾನ ಪಡೆದು, 1998ರಲ್ಲಿ ಜುನಾ ಅಖಾಡಾದ ಆಚಾರ್ಯ ಮಹಾಮಂಡಲೇಶ್ವರರನ್ನಾಗಿ ನೇಮಕಗೊಂಡರು. ಅವರು ಒಂದು ಲಕ್ಷಕ್ಕೂ ಹೆಚ್ಚಿನ ಸನ್ಯಾಸಿಗಳಿಗೆ ಆಧ್ಯಾತ್ಮಿಕ, ವೇದಾಂತ, ಯೋಗ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡಿದ್ದಾರೆ.

ಶಿಕ್ಷಣ, ಆರೋಗ್ಯ, ರಕ್ಷಣೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಅವರು ಕೊಡುಗೆ ನೀಡಿದ್ದಾರೆ. ಶ್ರೀಗಳು ಪವಿತ್ರ ಅಮರನಾಥ ಯಾತ್ರೆಯ ನಿರ್ವಹಣೆಯನ್ನು ನೋಡಿಕೊಳ್ಳುವ ದೇಗುಲ ಮಂಡಳಿಯ ಸದಸ್ಯರೂ ಆಗಿದ್ದಾರೆ. ಅವರು ವಿಶ್ವಸಂಸ್ಥೆ ಸೇರಿದಂತೆ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸನಾತನ ಧರ್ಮವನ್ನು ಪ್ರತಿನಿಧಿಸಿದ್ದಾರೆ.

ವಿಜ್ಞಾತಂ ಪುರಸ್ಕಾರದ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 19ರಂದು ನಡೆಸಲಾಯಿತು. ಪರಮಪೂಜ್ಯ ಡಾ‌. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

ತುಮಕೂರಿನ ಸಿದ್ದಗಂಗಾ ಮಠಾಧೀಶರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸಮಾರಂಭದಲ್ಲಿ ದಿವ್ಯ ಉಪಸ್ಥಿತಿ ಹೊಂದಿ, ಸಮಾರಂಭವನ್ನು ಉದ್ಘಾಟಿಸಿದರು.

ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ವಿಜ್ಞಾತಂ ಸಂಚಯ – 3ನ್ನು ಬಿಡುಗಡೆಗೊಳಿಸಿದರು. ಸಮಾರಂಭದಲ್ಲಿ ಮಂಡ್ಯ ಕ್ಷೇತ್ರದ ಶಾಸಕರಾದ ರವಿ ಗಣಿಗ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಅವರು ಉಪಸ್ಥಿತರಿದ್ದರು.

ಸಮಾರಂಭದ ಅಂಗವಾಗಿ, ವಿಶೇಷ ವಸ್ತುಪ್ರದರ್ಶನವನ್ನು ಆಯೋಜಿಸಲಾಯಿತು.

ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಖ್ಯಾತ ವಿಜ್ಞಾನಿಗಳು, ಮಾಜಿ ರಾಷ್ಟ್ರಪತಿ ಹಾಗೂ ಶಿಕ್ಷಣ ತಜ್ಞರಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಮೊಮ್ಮಗನಾದ ಡಾ. ಗೌತಮ್ ರಾಧಾಕೃಷ್ಣ ದೇಸಿರಾಜು ಅವರು ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿವಿಧ ವೈಜ್ಞಾನಿಕ ಮಾದರಿಗಳನ್ನು ಪ್ರಸ್ತುತಪಡಿಸಿದರು. ಎಚ್ಎಎಲ್ ಸಂಸ್ಥೆಯ ಮಾದರಿಗಳನ್ನೂ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಯಿತು.

ರಕ್ಷಣಾ, ಬಾಹ್ಯಾಕಾಶ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ಅವರು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದು, ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಸಮಾರಂಭದ ಅಂಗವಾಗಿ, ಫೆಬ್ರವರಿ 19, ಬುಧವಾರದಂದು ಇಸ್ರೋದ ನಿವೃತ್ತ ಗ್ರೂಪ್ ಡೈರೆಕ್ಟರ್ ಆದ ಡಾ. ಐ ವೇಣುಗೋಪಾಲ್ ಅವರು ‘ರೋಲ್ ಆಫ್ ಇಂಜಿನಿಯರ್ಸ್ ಇನ್ ಸ್ಪೇಸ್ ಆ್ಯಂಡ್ ಚಂದ್ರಯಾನ್ ಮಿಷನ್ ಆ್ಯಂಡ್ ಫ್ಯೂಚರ್ ಹ್ಯುಮನ್ ಹ್ಯಾಬಿಟಾಟ್ಸ್’ ವಿಚಾರದ ಕುರಿತು ಉಪನ್ಯಾಸ ನೀಡಿದರು.

ಬಳಿಕ, ಮೈಸೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ ಎನ್ ಬಿ ರಾಮಚಂದ್ರ ಅವರು ‘ಜೆನೆಟಿಕ್ಸ್ ಅಂಡ್ ಜೆನಾಮಿಕ್ಸ್ ಡಿಪಾರ್ಟ್ಮೆಂಟ್ಸ್ ಇನ್ ಮೆಡಿಕಲ್ ಸ್ಕೂಲ್’ ವಿಚಾರದಲ್ಲಿ ಉಪನ್ಯಾಸ ನೀಡಿದರು.

ಮೂರನೇ ಅವಧಿಯಲ್ಲಿ, ಬೆಂಗಳೂರಿನ ವಿಭು ಅಕಾಡೆಮಿಯ ಮುಖ್ಯಸ್ಥರಾದ ಡಾ. ವಿ ಬಿ ಆರತಿ ಅವರು ಭಾರತೀಯ ಸಾಹಿತ್ಯದಲ್ಲಿ ಮನೋವಿಜ್ಞಾನ ಎಂಬ ವಿಚಾರದ ಕುರಿತು ಉಪನ್ಯಾಸ ನೀಡಿದರು.

ಸಮಾರಂಭದ ಅಂಗವಾಗಿ, ಫೆಬ್ರವರಿ 19ರಂದು ರಸಪ್ರಶ್ನೆ, ನೃತ್ಯೋತ್ಸವ, ಮತ್ತು ಸುಗಮ ಸಂಗೀತ ಸಮಾರಂಭವನ್ನು ಆಯೋಜಿಸಲಾಯಿತು.

ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಫೆಬ್ರವರಿ 20ರಂದು ನೆರವೇರಿಸಲಾಯಿತು.

ಪ್ರಶಸ್ತಿ ಪುರಸ್ಕೃತರಾದ ಪರಮಪೂಜ್ಯ ಶ್ರೀ ಸ್ವಾಮಿ ಅವಧೇಶಾನಂದ ಗಿರಿ ಮಹಾರಾಜ್, ಆರ್ಷ ವಿದ್ಯಾ ಮಂದಿರ ರಾಜ್‌ಕೋಟ್, ಗುಜರಾತಿನ ಪರಮಪೂಜ್ಯ ಶ್ರೀ ಸ್ವಾಮಿ ಪರಮಾತ್ಮಾನಂದ ಸರಸ್ವತೀ ಸ್ವಾಮೀಜಿ, ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ಪರಮಪೂಜ್ಯ ಶ್ರೀ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ಸಂಸದ ಡಾ. ಕೆ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!