Accident: Five people from Karnataka died tragically on their way to Kumbh Mela

Accident: ಕುಂಭಮೇಳಕ್ಕೆ ತೆರಳುತ್ತಿದ್ದ ಕರ್ನಾಟಕದ ಐದು ಮಂದಿ ದಾರುಣ ಸಾವು

ವಾರಾಣಸಿ; ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ವಾಹನವೊಂದು ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ (Accident) ಐವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತ ಐವರಲ್ಲಿ ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಮಿರ್ಜಾಮುರಾದ್ ಠಾಣಾ ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಸಂತೋಷ್ ಕುಮಾರ್ (43 ವರ್ಷ), ಸುನೀತಾ(35 ವರ್ಷ), ನೀಲಮ್ಮ(60 ವರ್ಷ) ಗಣೇಶ್ ಮತ್ತು ಶಿವಕುಮಾರ್ ಮೃತ ದುರ್ದೈವಿಗಳು.

ಕವಿತಾ, ಅನಿತಾ, ಲೀಲಾವತಿ, ಸಾಯಿನಾಥ್, ಭಗವಾನ್ ಮತ್ತು ಸುಲೋಚನಾ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಐವರು ಒಂದೇ ಕುಟುಂಬದವರು ಎಂದು ಹೇಳಲಾಗುತ್ತಿದೆ. ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ವಾಹನವು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಯಿಂದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅಸುನೀಗಿದ್ದಾರೆ. ಆರು ಜನ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕುಂಭಮೇಳಕ್ಕೆ ತೆರಳಿ ವಾಪಸ್‌ ಆಗುತ್ತಿದ್ದ ಬೀದರ್‌ನ ಲಾಡಗೇರಿ ಬಡಾವಣೆಯ 14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಇದಾಗಿದೆ ಎಂದು ಹೇಳಲಾಗುತ್ತಿದೆ. ಅಯೋಧ್ಯೆ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!