H.D. Kumaraswamy demands linking Aadhaar to voter ID card

ನಾನು ತಿಂಗಳಿಗೆ ₹10,000 ಗ್ಯಾರಂಟಿ ಕೊಡುತ್ತೇನೆ; ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಮುಡಾ‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನಾಲ್ವರು ಆರೋಪಿಗಳ ಅಪರಾಧದ ಕುರಿತು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಸಂಸ್ಥೆಯನ್ನು ದೇವರೇ ಕಾಪಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ವ್ಯಂಗ್ಯವಾಡಿದರು.

ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಮುಡಾ‌ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ.

ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟಬಂದಂತೆ, ಅನುಕೂಲ ಆಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ.

ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು‌ ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ. ಈ‌ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ.

ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಎಸ್ ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್ ಐಟಿಗೆ ನೇಮಕ ಮಾಡಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

40 ವರ್ಷದ ಹಿಂದೆ ನಾನು ಇದೇ ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿದ್ದಾಗ ಕಷ್ಟಪಟ್ಟು ಸಂಪಾದನೆ ಮಾಡಿದ ಜಮೀನು ಅದಾಗಿದೆ. 14 ಎಕರೆ ಒತ್ತುವರಿಯಾಗಿದೆ ಎಂದು ಆರೋಪ ಮಾಡಿದ್ದಾರೆ. ನಾನು ಹಿಂದೆಯೇ ಅವರಿಗೆ ಪತ್ರ ಬರೆದು, ಸರ್ವೇ ಮಾಡಿಕೊಳ್ಳಿ.. ಒತ್ತುವರಿ ಆಗಿದ್ದರೆ ವಾಪಸ್ ಪಡೆದುಕೊಳ್ಳಿ ಎಂದು ಹೇಳಿದ್ದೇನೆ.

ತನಿಖೆ ನಡೆಸಿ ವಶಕ್ಕೆ ತೆಗೆದುಕೊಳ್ಳಿ ಎಂದು ಪತ್ರವನ್ನೇ ಬರೆದಿದ್ದೆ. ಆದರೆ, ನನ್ನ ಮನವಿ ಅಲಕ್ಷ್ಯ ಮಾಡಿ ನಲವತ್ತು ವರ್ಷಗಳಿಂದ ನನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಮೂಲ ದಾಖಲೆಗಳೆ ಇಲ್ಲ ಎಂದು ಸರ್ಕಾರವೇ ಹೇಳುತ್ತಿದೆ. ಆದರೆ, ಈಗ ಮೂಲ ಮಾಲೀಕರು ಹುಟ್ಟಿಕೊಂಡಿದ್ದಾರೆ!! ಅವರು ಯಾರು? ಎಲ್ಲಿಂದ ಬಂದರು? ಯಾರು ಕರೆದುಕೊಂಡು ಬಂದರು ಎನ್ನುವ ಮಾಹಿತಿ ನನಗಿದೆ ಎಂದ ಅವರು; ಇಂಟರ್ ನ್ಯಾಷನಲ್ ಸರ್ವೇ ಮಾಡಿಸಲಿ.

ನಾನೇನು ಹೆದರುವ ವ್ಯಕ್ತಿ ಅಲ್ಲ. ಸಿಎಂ ಸಿದ್ದರಾಮಯ್ಯ‌ ಸತ್ಯ‌ಹರಿಶ್ಚಂದ್ರರೇ? ಹಿನಕಲ್‌ ಸಾಕಮ್ಮನ ಜಮೀನು ವಿವಾದ ಯಾವುದು? ಅದಕ್ಕೂ ಸಿದ್ದರಾಮಯ್ಯ ಅವರಿಗೂ ಏನು ಸಂಬಂಧ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಕನ್ನಡಿಗರಿಗೆ ರಕ್ಷಣೆ ಇಲ್ಲ

ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣದ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು; ಈ ಸರ್ಕಾರ ಯಾರಿಗೆ ರಕ್ಷಣೆ ಕೊಡುತ್ತದೆ? ಮಂತ್ರಿಗಳೊಬ್ಬರು ಮರಾಠಿಯಲ್ಲೇ ಭಾಷಣ ಮಾಡಿದ್ದಾರೆ.

2006-07ರಲ್ಲಿ ನಾನು ಸಿಎಂ ಆಗಿದ್ದಾಗ
ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಬಳಿ ನಿಯೋಗ ಹೋಗಿದ್ದರು. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ಮಾಡಿದರು. ಆದರೆ‌, ನಾನು‌ ಅದಕ್ಕೆ ಅವಕಾಶ ಕೊಡಲಿಲ್ಲ.

ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿ ಮಾಡಿ, ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದೆ. ಈ ಸರ್ಕಾರದ ಆಡಳಿತದಲ್ಲಿ ಬೆಳಗಾವಿ ಪರಿಸ್ಥಿತಿ ಅಯೋಮಯವಾಗಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರಿಗೆ ರಾಜಕೀಯ ವೈರಾಗ್ಯ ಬಂದ ಹಾಗಿದೆ. ರಾಜೀನಾಮೆ ಬಗ್ಗೆ ಮಾತನಾಡುತ್ತಿದ್ದಾರೆ. ರಾಜಕೀಯದಲ್ಲಿ ಮರ್ಯಾದಸ್ಥರು ಇರುವುದು ಒಳ್ಳೆಯದಲ್ಲ ಎಂದು‌ ಅವರಿಗೆ ಅನಿಸಿರಬೇಕು.

136 ಕ್ಷೇತ್ರಗಳನ್ನು ಗೆದ್ದಿರುವ ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ. ಯಾವ ವಿಚಾರದಲ್ಲಿಯೂ ಇವರಿಗೆ ನಿಯಂತ್ರಣ ಇಲ್ಲ. ಆದರೂ, ಸಚಿವ ಮಹದೇವಪ್ಪ ಅವರು ಸಿಎಂ ರೆಕಾರ್ಡ್ ಮಾಡಬೇಕು ಎನ್ನುತ್ತಾರೆ.

ಮಹದೇವಪ್ಪ ಅವರೇ.. ಎಷ್ಟು ವರ್ಷ ಆಡಳಿತ ನಡೆಸಿದಿರಿ ಎನ್ನುವುದು ಮುಖ್ಯವಲ್ಲ. ಅಧಿಕಾರ ನಡೆಸಿದ ಸಂದರ್ಭದಲ್ಲಿ ಈ ನಾಡಿನ ಜನರ ಎಷ್ಟು ಸಮಸ್ಯೆ ಬಗೆಹರಿಸಿದಿರಿ ಎನ್ನುವುದು ಮುಖ್ಯ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಬೆಲೆ ಏರಿಸಿ ಗ್ಯಾರಂಟಿ ಕೊಡೋದಾದ್ರೆ ನಾನು ₹10,000 ಕೊಡುತ್ತೇನೆ:

ನನಗೆ ಒಮ್ಮೆ 20 ತಿಂಗಳು, ಇನ್ನೊಮ್ಮೆ 14 ತಿಂಗಳು ಜನಪರ ಆಡಳಿತ ನಡೆಸಿದ ಬಗ್ಗೆ ತೃಪ್ತಿ ಇದೆ. ನೀವು ಗ್ಯಾರಂಟಿ ಎಂದು ಮಾಡಿದ್ದೀರಿ. ನಿಮ್ಮ ಮನೆ ಹಣದಿಂದ ಯೋಜನೆ ಮಾಡಿದ್ದೀರಾ? ಗ್ಯಾರೆಂಟಿ‌ ಯೋಜನೆಗೆ ಯಾರಪ್ಪನ‌ ದುಡ್ಡು ಬಳಕೆ ಮಾಡುತ್ತಿದ್ದೀರಿ?

ಮೆಟ್ರೋ ದರ‌, ಬಸ್ ಪ್ರಯಾಣ ದರ, ಮದ್ಯದ ದರ, ಮುದ್ರಾಂಕ ಶುಲ್ಕ, ಮಾರ್ಗದರ್ಶಿ ಮೌಲ್ಯ ಏರಿಕೆ ಮಾಡಿ ಗ್ಯಾರಂಟಿ ಕೊಡಲಿಕ್ಕೆ ನೀವೇ ಬೇಕಾ? ಈ ರೀತಿ ಗ್ಯಾರಂಟಿ ಕೊಡುವುದಿದ್ದರೆ ನಾನು ತಿಂಗಳಿಗೆ ₹10,000 ಗ್ಯಾರಂಟಿ ಕೊಡುತ್ತೇನೆ ಎಂದು ಟಾಂಗ್ ಕೊಟ್ಟರು.

ಜಾತಿಗಣತಿ; ಚನ್ನಗಿರಿ ಶಾಸಕರ ಹೇಳಿಕೆ ಉಲ್ಲೇಖಿಸಿದ HDK

ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಮ್ಮ ಮನೆಗೆ ಬಂದು ಯಾರೂ ಜಾತಿಗಣತಿ ಮಾಡಿಲ್ಲ ಎಂದು ಚನ್ನಗಿರಿ ಕಾಂಗ್ರೆಸ್ ಎಂಎಲ್ ಎ ಹೇಳಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಹೇಳಿರುವ ಮಾತಿದು. ಧೈರ್ಯವಿದ್ದರೆ ಜಾತಿ ಗಣತಿ ವರದಿ ಬಿಡುಗಡೆ ಮಾಡಿ. ಆಮೇಲೆ ಏನು ನಡೆಯುತ್ತದೆ ಎನ್ನುವುದನ್ನು ನೋಡಿ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

ಬಹಳ ದಿನಗಳಿಂದ ಜಾತಿ ಗಣತಿ ವರದಿ ಗುಮ್ಮ ಬಿಡಲಾಗುತ್ತಿದೆ. ವರದಿ ಕೈ ಸರ್ಕಾರದ ಕೈ ಸೇರಿದೆ. ಬಿಡುಗಡೆ ಮಾಡುವುದು ಬಿಟ್ಟು ಮಾಧ್ಯಮಗಳ ಮೂಲಕ ಬಿಡುಗಡೆ ಏಕೆ ಸೋರಿಕೆ ಮಾಡಲಾಗುತ್ತಿದೆ. ಜಾತಿಗಣತಿ ವರದಿ ಇಟ್ಟುಕೊಂಡು ಪೂಜೆ ಮಾಡುತ್ತಿದ್ದೀರಾ ಹೇಗೆ? ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಯಾವುದನ್ನು ಕಾಂಗ್ರೆಸ್ ನವರಿಂದ ಸರಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ಕರ್ನಾಟಕ ಲೋಕಸೇವಾ ಆಯೋಗವನ್ನು ಹಾಳು ಮಾಡಿದಿರಿ.

ಕೇವಲ ಒಬ್ಬ ಹೆಣ್ಣು ಮಗಳಿಗಾಗಿ 370 ಮಕ್ಕಳ ಕುಟುಂಬಗಳನ್ನು ಬೀದಿಗೆ ತಂದಿ ನಿಲ್ಲಿಸಿದಿರಿ. ಕೆಪಿಎಸ್‌ಸಿ ಈವತ್ತು ಏನಾಗಿದೆ? ಬೇವಿನಮರ‌ ನೆಟ್ಟು‌ ಮಾವಿನ ಹಣ್ಣು ಕೇಳಿದರೆ ಸಿಗುತ್ತಾ? ಕೆಪಿಎಸ್‌ ಸಿ ಭ್ರಷ್ಟ ಕೂಪವಾಗಿದೆ ಎಂದು ಅವರು ಆರೋಪ ಮಾಡಿದರು.

ಮೂಟೆಗಟ್ಟಲೆ ಕಲ್ಲು ತಂದು ಹೊಡೆದವರನ್ನು ರಕ್ಷಣೆ ಮಾಡಬೇಕಾ?

ಮೈಸೂರಿನ ಉದಯಗಿರಿ ಗಲಭೆಯ ಗಲಭೆಕೋರರು ಯಾರೇ ಆಗಿದ್ದರೂ ಅವರನ್ನು ನಿರ್ದಯವಾಗಿ ಶಿಕ್ಷೆಗೆ ಗುರಿ ಮಾಡಬೇಕು. ಪೊಲೀಸ್ ವಾಹನಗಳ ಮೇಲೆ ಕಲ್ಲು ಹೊಡೆಯುತ್ತಾರೆ ಎಂದರೆ ನಮ್ಮ ರಾಜ್ಯದ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದಿದೆ ಎಂಬುದನ್ನು ಗಮನಿಸಬಹುದು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕರ್ನಾಟಕ ಕುವೆಂಪು ಅವರ ಸಂದೇಶದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿಯೇ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ನಾನು ಮನವಿ ಮಾಡಿಕೊಳ್ತೀನಿ. ನಮ್ಮ ಸಮಾಜಕ್ಕೆ ರಕ್ಷಣೆ ನೀಡಬೇಕೆಂದು‌ ನೀವು ಹೋಗುತ್ತೀರಿ. ನಿಮ್ಮ ಒಳ್ಳೆಯ ಉದ್ದೇಶವನ್ನು ದುರುಪಯೋಗ ಮಾಡಿಕೊಂಡು ಅವರು‌ ಭದ್ರವಾಗುತ್ತಾ ಹೋಗುತ್ತಿದ್ದಾರೆ.

ಎರಡೂ ಪಕ್ಷದ ನಾಯಕರಿಗೆ ನಾನು ಮನವಿ ಮಾಡಿಕೊಳ್ಳುವೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಿ. ಶಾಂತಿ, ನೆಮ್ಮದಿ ಹಾಳು ಮಾಡುವ ಇಂಥ ಗಲಭೆಕೋರ ಶಕ್ತಿಗಳನ್ನು ಮಟ್ಟ ಹಾಕಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದರು.

ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದವರನ್ನ ಬಲಿ ಹಾಕಬೇಕು. ಎಷ್ಟು ದಿನ ಅಂತ ಇಂತಹವರನ್ನು ಸಹಿಸಿಕೊಳ್ತೀರಿ. ಯಾರನ್ನೋ ಓಲೈಸಲು ಸರ್ಕಾರ ಇರುವುದಲ್ಲ.

ಎಲ್ಲರ ಸರ್ಕಾರ ಎಂಬುದನ್ನು ಕಾಂಗ್ರೆಸ್ ಮರೆಯಬಾರದು. ಕಾನೂನು‌ ಬಾಹಿರ ಚಟುವಟಿಕೆ ನಡೆಸುವವನು‌ ಯಾರೇ ಇರಲಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ. ಮೂಟೆಗಟ್ಟಲೆ ಕಲ್ಲು ತಂದು ಹೊಡೆದವರನ್ನು ರಕ್ಷಣೆ ಮಾಡಬೇಕಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಕೊಡಗು ಕ್ಷೇತ್ರದ ಲೋಕಸಭೆ ಸದಸ್ಯರಾದ ಯದುವೀರ ಚಾಮರಾಜ ಒಡೆಯರ್, ಮಾಜಿ ಸಚಿವರಾದ ಸಾ.ರಾ. ಮಹೇಶ್, ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿ ಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಮಹೇಶ್ ಸೇರಿದಂತೆ ಅನೇಕ ಗಣ್ಯರು ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!