ಪ್ರಪಂಚದಲ್ಲೆ ಅತಿ ದೊಡ್ಡ ಸಂವಿಧಾನ ಹೊಂದಿರುವ ದೇಶ ಭಾರತ

Doddaballapura: India has the largest constitution in the world

ದೊಡ್ಡಬಳ್ಳಾಪುರ (Doddaballapura): ಪ್ರಪಂಚದಲ್ಲೆ ಅತಿ ದೊಡ್ಡ ಸಂವಿಧಾನ ಹೊಂದಿರುವ ದೇಶ ಭಾರತವಾದರೆ, ಚಿಕ್ಕ ಸಂವಿಧಾನವನ್ನು ಅಮೇರಿಕ  ಹೊಂದಿದೆ ಎಂದು ಬೆಂಗಳೂರಿನ ಆದರ್ಶ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಎನ್.ನರಸಿಂಹಮೂರ್ತಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದಲ್ಲಿರುವ  ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತದ ಸಂವಿಧಾನ ರೂಪಿಸುವ ಜವಾಬ್ಧಾರಿಯನ್ನು ಹೊತ್ತು ಅಪಾರವಾದ ಶ್ರಮವಹಿಸಿದ ಡಾ.ಬಿ.ಆರ್. ಅಂಬೇಡ್ಕರ್, ಭಾರತದ  ಸಾಮಾಜಿಕ ಸುಧಾರಣೆಗಾಗಿ ನಿರಂತರ ಹೋರಾಟ ನಡೆಸಿದರು.   ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ಮಾಡುತ್ತಿದ್ದ ಅಂಬೇಡ್ಕರ್  ಅವರಿಗೆ ಸಮಸಮಾಜ ನಿರ್ಮಾಣ ವುದು ಅವರ ಮುಖ್ಯ ಗುರಿಯಾಗಿತ್ತು ಎಂದರು.

ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಿವಶಂಕರ್ ಮಾತನಾಡಿ, ವಿದ್ಯೆಯ ಮಹತ್ವವನ್ನು ಅರಿತಿದ್ದ ಡಾ.ಬಿ.ಅರ್.ಅಂಬೇಡ್ಕರ್ ಅವರು, ಅನಕ್ಷರತೆ ಮತ್ತು ಅಜ್ಞಾನವನ್ನು  ಮುಕ್ತಗೊಳಿಸಲು ಶಿಕ್ಷಣ ಅತಿ ಅಗತ್ಯವೆಂದರು.

ಶಿಕ್ಷಣದಿಂದ ಮಾತ್ರ ಶೋಷಣೆಗೆ ಒಳಗಾದವರನ್ನು ಸಾಮಾಜಿಕ ಅನ್ಯಾಯದಿಂದ ಮುಕ್ತಗೊಳಿಸಲು ಸಾಧ್ಯವಾಗುತ್ತದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯವನ್ನು ಪಡೆಯಲು ಜನರಿಗೆ ಶಿಕ್ಷಣ ಸಹಕಾರಿ ಆಗುತ್ತದೆ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ ಎಂದರು.

ಕನಸವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಮಾತನಾಡಿ, ಬುದ್ಧ,  ಬಸವಣ್ಣ ಅವರ ಆಶಯದಂತೆ  ತಾರತಮ್ಯಗಳಿಂದ ಮುಕ್ತವಾದ ಸಮಾಜವನ್ನು ಸ್ಥಾಪಿಸುವುದು  ಡಾ. ಅಂಬೇಡ್ಕರ್ ಅವರ ಗುರಿಯಾಗಿತ್ತು.

ಸಮಾಜದಲ್ಲಿರುವ ಶೋಷಣೆ, ದಬ್ಬಾಳಿಕೆ ಮತ್ತು ತಾರತಮ್ಯದ ವಿರುದ್ಧ ಅವರ  ಹೋರಾಟ  ನಿರಂತರವಾಗಿತ್ತು.  ಅಂಬೇಡ್ಕರ್ ಅವರು  ಸಂವಿಧಾನದಲ್ಲಿ ಪ್ರಜಾಪ್ರಭುತ್ವ, ಸಮಾನತೆ ಮತ್ತು ನ್ಯಾಯದ ಪರವಾದ ವಿಚಾರಗಳನ್ನು ಸೇರಿಸಿದರು. ಇದ್ದರಿಂದಾಗಿ
ವಿಶ್ವದಲ್ಲಿ ನಮ್ಮ ಭಾರತ ಸಂವಿಧಾನಕ್ಕೆ  ವಿಶೇಷ ಗೌರವ, ಘನತೆ, ಕೀರ್ತಿ ದೊರಕಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಎನ್.ಮಹೇಶ್.

ಹಣಬೆ  ಡಾ.ಬಿ.ಆರ್.ಅಂಬೇಡ್ಕರ್  ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ,  ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸ,   ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ  ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ  ಬಹುಮಾನ ಮತ್ತು ಪ್ರಶಸ್ತಿ ಪತ್ರಗಳ ವಿತರಣೆ ನಡೆಯಿತು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!