Bird flu: Mass killing of chickens

ಹಕ್ಕಿಜ್ವರ; ಕೋಳಿಗಳ ಸಾಮೂಹಿಕ ಹತ್ಯೆ..!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರವನ್ನು (Bird flu) ಹತೋಟಿಗೆ ತರಲು ತಾಲೂಕಿನ ವರದಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿಯಂತ್ರಣ ಕ್ರಮಗಳನ್ನು ಸಮರೋಪಾಧಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ. ಜನರು ಹೆಚ್ಚಿನ ಆತಂಕಕ್ಕೆ ಒಳಗಾಗದೆ ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು(SOP) ಪಾಲಿಸುವಂತೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಮನವಿ ಮಾಡಿದರು.

ಹಕ್ಕಿ ಜ್ವರ ನಿಯಂತ್ರಣದ ಕುರಿತು ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ನಿಯಂತ್ರಿಸುವ ಮೂಲಕ ರೋಗ ಬೇರೆಡೆಗೆ ಹರಡದಂತೆ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ.

ಈಗಾಗಲೇ ವರದಹಳ್ಳಿಯಲ್ಲಿ ಸಾವನ್ನಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢಪಟ್ಟಿರುವ ಕಾರಣ ಈ ಗ್ರಾಮವನ್ನು ಕೇಂದ್ರವಾಗಿಸಿಕೊಂಡು ಸುತ್ತಲೂ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಸಾಗಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂಧಿ ಹಾಕಲಾಗಿದೆ.

ವರದಹಳ್ಳಿಯಲ್ಲಿನ ಕೋಳಿಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, ರೋಗ ನಿಯಂತ್ರಣದ ಮುಂಜಾಗ್ರತಾ ಕ್ರಮದ ಭಾಗವಾಗಿ ಅವುಗಳನ್ನೆಲ್ಲಾ ಸರ್ಕಾರದ ಮಾರ್ಗಸೂಚಿಯಂತೆ ಸಾಮೂಹಿಕವಾಗಿ ವಿಲೇವಾರಿ ಮಾಡಲು ಸೂಚಿಸಲಾಗಿದೆ.

ಗ್ರಾಮದಲ್ಲಿನ ಕೋಳಿಗಳನ್ನು ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಇದುವರೆಗೆ ಗ್ರಾಮದ ಜನರಲ್ಲಿ ಯಾವುದೇ ಕೆಮ್ಮು, ಶೀತ, ನೆಗಡಿ, ಜ್ವರದಂತಹ ಪ್ರಕರಣಗಳು ಕಂಡುಬಂದಿಲ್ಲ. ಆದರೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಪ್ರತಿ ಕುಟುಂಬದ ಆರೋಗ್ಯದ ಮೇಲೂ ನಿಗಾ ಇಡಲಾಗಿದೆ ಎಂದರು.

ವರದಹಳ್ಳಿಯ ಒಂದು‌ ಕಿ.ಮೀ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಉಲ್ಬಣವಾಗಿ ಹೊರಹೋಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಉಳಿದೆಡೆಗಳಲ್ಲಿ ಯಾವುದೇ ರೀತಿ ಸಮಸ್ಯೆ ಕಂಡು ಬರದ ಕಾರಣ ಸಾರ್ವಜನಿಕರು ಶುಚಿತ್ವವನ್ನೂ ಗಮನದಲ್ಲಿಟ್ಟುಕೊಂಡು ಆರೋಗ್ಯವಾಗಿರುವ ಕೋಳಿ ಮಾಂಸವನ್ನು ಚೆನ್ನಾಗಿ ಬೇಯಿಸಿ ಎಂದಿನಂತೆ ತಿನ್ನಲು ಬಳಸಬಹುದು.

ಯಾವುದೇ ರೀತಿಯ ಗೊಂದಲ,ಆತಂಕ ಬೇಡ. ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಮರೋಪಾದಿಯ ಕ್ರಮಗಳನ್ನು ಕೈಗೊಂಡಿದೆ. ಹೊರಗಿನಿಂದ ವಾಹನಗಳ ಮೂಲಕ ಜಿಲ್ಲೆಗೆ ಬರುವ ಕೋಳಿಗಳ ಮಾದರಿಗಳನ್ನೂ ಪರೀಕ್ಷೆಗೆ ಒಳಪಡಿಸಿ ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

ಆರೋಗ್ಯ ಇಲಾಖೆ, ಪಶುವೈದ್ಯಕೀಯ ಸೇವಾ ಇಲಾಖೆ,ಅರಣ್ಯ ಇಲಾಖೆ,ಕಂದಾಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಸಭೆಗಳನ್ನು ಕಾಲಕಾಲಕ್ಕೆ ನಡೆಸಿ ಜಿಲ್ಲಾಡಳಿತ ವರದಿ ಪಡೆದು ನಂತರದ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ವರದಹಳ್ಳಿ ಗ್ರಾಮಕ್ಕೆ ಹಕ್ಕಿ ಸಾಗಾಣಿಕೆ ವಾಹನಗಳು ಹಾಗೂ ಹೊರಗಡೆಯಿಂದ ಕೋಳಿಗಳನ್ನು ಗ್ರಾಮಕ್ಕೆ ತರುವುದನ್ನು ನಿರ್ಬಂಧಿಸಲಾಗಿದೆ.

ವಿಪತ್ತು ನಿರ್ವಹಾಣಾ ಕಾಯ್ದೆಯನ್ವಯ ಆದೇಶ ಹೊರಡಿಸಿ ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯ ಸುತ್ತಮುತ್ತಲ ಕೋಳಿ ಸಾಗಾಣಿಕಾ ವಾಹನಗಳನ್ನು, ಕೋಳಿಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ ಜೊತೆಗೆ ವರದಹಳ್ಳಿಯಲ್ಲಿರುವ ಕೋಳಿಗಳನ್ನು ಸಾಮೂಹಿಕ ಹತ್ಯೆ ಮಾಡಿ ವೈರಸ್ ನಿಯಂತ್ರಣ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ.

ಸ್ವಚ್ಛತೆಯನ್ನು ಕಾಪಾಡಲು ಪಿ.ಡಿ.ಓ ಅವರಿಗೆ ನಿರ್ದೇಶನ ನೀಡಿದ್ದೇವೆ ಹಾಗೂ ಪ್ರತಿದಿನದ ನಿಯಂತ್ರಣ ಕ್ರಮದ ವರದಿಯನ್ನು ಪಶು ಇಲಾಖೆಯ ಉಪನಿರ್ದೇಶಕರಿಂದ ಪಡೆದು ಕಾಲೋಚಿತವಾಗಿ ನಿಯಂತ್ರಣ ಕ್ರಮಗಳನ್ನು ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿ ಮಾತನಾಡುತ್ತಾ ಹಕ್ಕಿ ಜ್ವರವು H5N1 ವೈರಸ್‌ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ, ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.

ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.

ರೋಗ ಪೀಡಿತ ಕೋಳಿ ಅಥವಾ ಹಕ್ಕಿಯ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಹಾಗೂ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ತ್ಯಾಜ್ಯಗಳು ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ. ಮತ್ತು ಕೆಲವು ಸಂದರ್ಭದಲ್ಲಿ ಗಾಳಿಯ ಮೂಲಕವು ಮನುಷ್ಯರಿಗೆ ಹರಡುವ ಸಾಧ್ಯತೆ ಇರುತ್ತದೆ.

ರೋಗ ಲಕ್ಷಣಗಳು

ಈ ರೋಗ ಪೀಡಿತರಲ್ಲಿ ಜ್ವರ, ಕೆಮ್ಮು, ಶಿತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು ಉಸಿರಾಟದಲ್ಲಿ ತೊಂದರೆ ಈ ಲಕ್ಷಣಗಳು ಕಾಣಿಸಿದ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ತಿಳಿಸಿದರು.

ತೆಗೆದುಕೊಳ್ಳಬೇಕಾದ ಮುನ್ನೆಚರಿಕೆ ಕ್ರಮಗಳು

ಶಂಕಿತ ಹಕ್ಕಿಜ್ವರ ಪೀಡಿತ ಕೋಳಿಗಳು, ಹಕ್ಕಿಗಳು ಹಾಗೂ ಬಾತುಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರವಹಿಸುವುದು. ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಸ್ಪರ್ಶಿಸಬಾರದು.

ಹಕ್ಕಿಜ್ವರ ಶಂಕಿತ ಅಥವಾ ಪೀಡಿತ ಫಾರಂಗಳಿಗೆ ಭೇಟಿ ನೀಡಬಾರದು. ಹಕ್ಕಿಜ್ವರ ಹರಡಿರುವ ಫಾರಂನ ವಾತಾವರಣದ ಸಂಪರ್ಕಕ್ಕೆ ಬಂದಲ್ಲಿ ತಕ್ಷಣ ತಮ್ಮ ಕೈಕಾಲು ಮತ್ತು ಮುಖವನ್ನು ತೊಳೆದುಕೊಂಡು ಬಟ್ಟೆಯನ್ನು ಬದಲಾಯಿಸಿಕೊಳ್ಳುವುದು. ಮತ್ತು ಮುಂದಿನ 4 ದಿನಗಳವರೆಗೆ ತಮ್ಮ ದೇಹದ ಉಷ್ಣಾಂಶದಲ್ಲಿ ಆಗುವ ಬದಲಾವಣೆಗಳನ್ನು ಗಮನಿಸುವುದು.

ಒಂದು ವೇಳೆದ ಜ್ವರದ ಲಕ್ಷಣಗಳು ಕಾಣಿಸಿಕೊಂಡಲ್ಲಿ ವೈದ್ಯರನ್ನು ಸಂಪರ್ಕಿಸುವುದು. ಸೋಂಕಿರುವ ಪ್ರದೇಶದಲ್ಲಿ ಯಾವುದೇ ವಸ್ತುವನ್ನು ಮುಟ್ಟಿದಾಗ ಯಾವಾಗಲೂ ಕೈಗಳನ್ನು ಸೋಪಿನಿಂದ ತೊಳೆಯಬೇಕು ಎಂದು ಸಲಹೆ ನೀಡಿದರು.

ಸರಿಯಾಗಿ ಬೇಯಿಸಿದ ಕೋಳಿ ಮಾಂಸದ ಸೇವೆನೆಯಿಂದ ಹಕ್ಕಿಜ್ವರ ಬರುವುದಿಲ್ಲ

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವಷ್ಟೇ ಸೇವಿಸಬೇಕು. ಅಡುಗೆಗಾಗಿ ಕೋಳಿ ಮಾಂಸವನ್ನು ಸಿದ್ಧಪಡಿಸಿದ ನಂತರ ಕೈಗಳನ್ನು ನಂಜುನಾಶಕದಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು.

ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸಬಾರದು. ಹಕ್ಕಿಜ್ವರವು ಮುನ್ನೆಚರಿಕೆಯಿಂದ ತಡೆಯಬಲ್ಲ ಖಾಯಿಲೆ ಆದ್ದರಿಂದ ಖಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಮಾಹಿತಿಯನ್ನು ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆಮಾಡಿ ಎಂದು ತಿಳಿಸಿದರು.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!