Dying traditional customs, culture, rites; HD Kumaraswamy

ನಶಿಸುತ್ತಿರುವ ಪಾರಂಪರಿಕ ಆಚಾರ-ವಿಚಾರ, ಸಂಸ್ಕೃತಿ, ಸಂಸ್ಕಾರ; ಹೆಚ್.ಡಿ.ಕುಮಾರಸ್ವಾಮಿ ಕಳವಳ

ಮಂತ್ರಾಲಯ: ಸಮಾಜದಲ್ಲಿ ಇವತ್ತು ಅಶಾಂತಿ ವಿಜೃಂಭಿಸುತ್ತಿದೆ. ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಎಲ್ಲರೂ ಗುರುರಾಯರ ಉಪದೇಶವನ್ನು ಆಲಿಸಬೇಕು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಕರೆ ನೀಡಿದರು.

ಮಂತ್ರಾಲಯದಲ್ಲಿ ʼಶ್ರೀ ರಾಘವೇಂದ್ರ ವೈಭವೋತ್ಸವʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು; ಮಂತ್ರಾಲಯಕ್ಕೆ ಬರುವ ಯಾವುದೇ ಜಾತಿ, ಧರ್ಮದ ಭಕ್ತರು ಗುರು ರಾಘವೇಂದ್ರರ ಅನುಗ್ರಹದಿಂದ ಕಷ್ಟಗಳಿಂದ ಪಾರಾಗುವ ಅನೇಕ ಕಥೆಗಳನ್ನು, ಜೀವಂತ ಉದಾಹರಣೆಗಳನ್ನು ನಾನು ಕೇಳಿದ್ದೇನೆ.

ಎಲ್ಲರನ್ನೂ ಸಮಾನವಾಗಿ ಕಾಣುವ ಗುರುರಾಯರ ಪರಂಪರೆ ಶ್ರೀಮಠದಲ್ಲಿ ಮುಂದುವರಿದುಕೊಂಡು ಬಂದಿದೆ. ಎಲ್ಲರನ್ನೂ ಗುರುರಾಯರು ಅನುಗ್ರಹಿಸುತ್ತಾ ಬಂದಿದ್ದಾರೆ ಎಂದು ಹೇಳಿದರು.

ನಮ್ಮ ದೇಶ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲು ಇಟ್ಟಿದೆ.

ದೇಶದಲ್ಲಿ ಹಣಕಾಸು ಸಮಸ್ಯೆ ಇಲ್ಲ. ಆದರೆ, ನಮ್ಮ ಪಾರಂಪರಿಕ ಆಚಾರ ವಿಚಾರ, ಸಂಸ್ಕೃತಿ, ಸಂಸ್ಕಾರಗಳಿಂದ ದೂರವಾಗಿರುವ ಕಾರಣಕ್ಕೆ ಸಮಸ್ಯೆಗಳು ಜಟಿಲವಾಗುತ್ತಿವೆ. ಇದಕ್ಕೆ ಗುರುರಾಯರ ಉಪದೇಶ ಹಾಗೂ ಅವರು ತೋರಿದ ಸನ್ಮಾರ್ಗವೇ ದಿವ್ಯಔಷಧವಾಗಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ನಡೆಯಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ಶ್ರೀಮಠವನ್ನು ಗುರುರಾಯರ ಆಶಯದಂತೆ ಮುನ್ನಡೆಸುತ್ತಿರುವ ಪರಮಪೂಜ್ಯ ಶ್ರೀ ಸುಬುಧೇಂದ್ರ ಶ್ರೀಪಾದಂಗಳವರನ್ನು ನಾನು ಚೆನ್ನಾಗಿ ಬಲ್ಲೆ. ಅವರದ್ದು ಮಗುವಿನಂಥ ಮನಸ್ಸು. ದಯೆ, ಕರುಣೆಯಿಂದ ಅವರು ಸಮಾಜವನ್ನು ಸನ್ಮಾರ್ಗದತ್ತ ನಡೆಸುತ್ತಿದ್ದಾರೆ. ಅವರ ಮಾರ್ಗದರ್ಶನದಿಂದ ನಾವೆಲ್ಲರೂ ಜನಸೇವೆ ಮಾಡುತ್ತಿವೆ ಎಂದು ಸಚಿವರು ನುಡಿದರು.

ಶ್ರೀಮಠವು ಸಮಾಜಮುಖಿ ಕಾರ್ಯಗಳಿಂದ ಜಾಗತಿಕವಾಗಿ ಭಕ್ತರನ್ನು ಸೆಳೆಯುತ್ತಿದೆ. ಪರಮಪೂಜ್ಯರ ನೇತೃತ್ವದಲ್ಲಿ ಮಠವು ವಿಶ್ವವ್ಯಾಪಿಯಾಗಿ ಬೆಳೆಯಲಿ ಎಂದು ಆಶಿಸಿದ ಸಚಿವರು, ಈ ಕಾರ್ಯದಲ್ಲಿ ನಾವೆಲ್ಲರೂ ಗುರರಾಯರ ಸೇವೆಯಲ್ಲಿ ಸದಾ ಇರುತ್ತೇವೆ ಎಂದರು.

ರಾಯಚೂರಿನಲ್ಲಿ ಏಮ್ಸ್‌, ಶ್ರೀಗಳ ಆಶಯಕ್ಕೆ ಸಚಿವರ ಸ್ಪಂದನೆ

ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆ, ಸಾಕಷ್ಟು ಹಿಂದುಳಿದಿರುವ ರಾಯಚೂರು ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)‌ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ತಾವು ಸಕಾರಾತ್ಮಕವಾಗಿ ಪ್ರಯತ್ನ ಮಾಡಬೇಕು ಎಂದು ಶ್ರೀ ಸುಬುಧೇಂದ್ರ ಶ್ರೀಗಳವರು ಸಚಿವರಿಗೆ ತಿಳಿಸಿದರು.

ಅಗತ್ಯಬಿದ್ದರೆ ಈ ಭಾಗದ ವತಿಯಿಂದ ಪ್ರಧಾನಿಗಳ ಬಳಿಗೆ ಪಕ್ಷಾತೀತವಾಗಿ ನಿಯೋಗ ಬರುವುದಾಗಿ ಶ್ರೀಗಳು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು; ಈ ಬಗ್ಗೆ ನಾನು ಕಾರ್ಯ ಪ್ರವೃತ್ತನಾಗುತ್ತೇನೆ ಎಂದು ಶ್ರೀಗಳಿಗೆ ತಿಳಿಸಿದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಶ್ರೀ ಸುಬುಧೇಂದ್ರ ಶ್ರೀಪಾದಂಗಳವರು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಆಶೀರ್ವದಿಸಿದರು.

ತಮಿಳುನಾಡು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಆರ್.‌ ಸುಬ್ರಮಣಿಯಂ, ರಾಜ್ಯದ ಸಣ್ಣ ನೀರಾವರಿ ಸಚಿವರಾದ ಎನ್.‌ಎಸ್.‌ ಬೋಸರಾಜು ಅವರು ಉಪಸ್ಥಿತರಿದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!