ದೊಡ್ಡಬಳ್ಳಾಪುರ: ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ (Santosh lad) ಸದನಕ್ಕೆ ತಿಳಿಸಿದರು.
ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡಳಿಯಲ್ಲಿ 56 ಲಕ್ಷ ಮಂದಿ ನೊಂದಣಿಯಾಗಿದ್ದರು.
ಮನೆಮನೆಗೆ ತೆರಳಿ ತಪಾಸಣೆ ಮಾಡಿದಾಗ 26 ಲಕ್ಷ ನಕಲಿ ಕಾರ್ಡ್ಗಳನ್ನು ರದ್ದುಪಡಿಸ ಲಾಗಿದೆ. ಅದರ ಬಳಿಕ 30 ಲಕ್ಷ ಕಾರ್ಡ್ಗಳು ಉಳಿದುಕೊಂಡಿವೆ.
ಕಾರ್ಮಿಕರಿಗೆ ಸೌಲಭ್ಯ ನೀಡಲು ನಮ್ಮ ಸರಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.