ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು 2025-26ನೇ ಸಾಲಿನ ಬಜೆಟ್ (Badget 2025) ಮಂಡಿಸುತ್ತಿದ್ದಾರೆ.
ಯುವಸಬಲೀಕರಣ ಮತ್ತು ಕ್ರೀಡೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಅಲ್ಲದೆ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.