Registration for skills training

Budget 2025: ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಕ್ಕಿದ್ದೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು 2025-26ನೇ ಸಾಲಿನ ಬಜೆಟ್ (Budget 2025) ಮಂಡಿಸಿದ್ದಾರೆ.

ಈ ಕುರಿತು ಆಡಳಿತ ಪಕ್ಷದವರು ಸಿಎಂ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್ ಅನ್ನು ಸೂಪರ್ ಎಂದರೆ, ವಿರೋಧ ಪಕ್ಷದವರು ಹಲಾಲ್ ಬಜೆಟ್, ಮುಸ್ಲಿಂ ಬಜೆಟ್, ಪಾಕಿಸ್ತಾನಿ ಬಜೆಟ್, ತುಷ್ಟೀಕರಣ ಎಂದು ಟೀಕಿಸಿದ್ದಾರೆ.

ಇನ್ನೂ ಇಂದು ಮಂಡಿಸಲಾದ ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಕ್ಕಿದ್ದೇನು ಎಂಬುದನ್ನು ಗಮನಿಸಿದರೆ.. ಮೊದಲನೇಯದಾಗಿ, ‘ನಮ್ಮ ಮೆಟ್ರೋ’ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ.

ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷಿ ಇದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.

3,190 ಕೋಟಿ ರೂ. ಮೊತ್ತದ ದೇವನಹಳ್ಳಿ-ವಿಜಯಪುರ- ಹೆಚ್ ಕ್ರಾಸ್- ವೇಮಗಲ್- ಮಾಲೂರು – ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಪ್ರಸಕ್ತ ಸಾಲಿನಲ್ಲಿ 30 ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.

ದೊಡ್ಡಬಳ್ಳಾಪುರ ತಾಲೂಕಿನ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರಮ್ ನಿರ್ಮಿಸಲಾಗುವುದು.

ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ತುಂಬಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!