International Women's Day celebration from Doddaballapur Kasapa

ದೊಡ್ಡಬಳ್ಳಾಪುರ ಕಸಾಪದಿಂದ ವಿಶ್ವ ಮಹಿಳಾ ದಿನಾಚರಣೆ

ದೊಡ್ಡಬಳ್ಳಾಪುರ (Women’s Day): ಮಹಿಳೆಯರು ಶಿಕ್ಷಣ ಮತ್ತು ಸಂಘಟನೆಯ ಮಹತ್ವದ ಅರಿತಾಗ. ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಡಿ.ಪುಷ್ಪಾವತಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರದ ಖಾಸಗಿ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಿಳೆಯರು ಆತ್ಮವಿಶ್ವಾಸ ಹಾಗೂ ಸ್ವ ಸಾಮರ್ಥ್ಯದಿಂದ ಸಮಾಜದಲ್ಲಿ ಮುನ್ನಡೆಯಬೇಕು. ಸಮಾಜದ ಪರಿವರ್ತನೆ ಹಾಗೂ ಅಭ್ಯುದಯಕ್ಕಾಗಿ ಮಹಿಳಾ ಜಾಗೃತಿಯೊಂದೇ ಮಾರ್ಗವಾಗಿದೆ. ಮಹಿಳಾ ಸಮಾನತೆ ಮೊದಲು ಮನೆಯಿಂದ ಶುರುವಾಗಬೇಕು. ಲಿಂಗ ತಾರತಮ್ಯ ಇರಬಾರದು ಎಂದರು.

ಮಹಿಳೆ ತನ್ನಲ್ಲಿರುವ ಅಂತರ್‌ ಶಕ್ತಿಯನ್ನು ಹೊರ ತಂದಾಗ ಮಾತ್ರ ಸಬಲರಾಗಲು ಸಾಧ್ಯ. ಸಮಾಜದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಒಪ್ಪಿ ಮುನ್ನಡೆದರೆ ಸಬಲೀಕರಣ, ಮಹಿಳಾ ಸಶಕ್ತೀಕರಣ‌ ಸಾಧ್ಯವಾಗುತ್ತದೆ.

ಮಹಿಳೆಯರು ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಕಟ್ಟುಪಾಡುಗಳಿಂದ ಹೊರಬರಬೇಕು. ವೈಯಕ್ತಿಕ ಆರೋಗ್ಯ ಮತ್ತು ಪರಿಸರದ ಸ್ವಚ್ಚತೆಗೂ ಆದ್ಯತೆ ನೀಡಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಮಹಿಳೆಯರ ಪಾತ್ರ ಮಹತ್ವವಾಗಿರುತ್ತದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್ ಮಾತನಾಡಿ,
ಇಂದು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಮಹಿಳೆಯರು. ಕೊಡುಗೆಯನ್ನು ನೆನೆಯುತ್ತಾ ಮಹಿಳಾ ದಿನಾಚರಣೆಯನ್ನು ಆಚರಿಸುವುದಾಗಿದೆ.
ಪ್ರತಿ ವರ್ಷ ಮಾರ್ಚ್ 8 ರಂದು ವಿಶ್ವದೆಲ್ಲೆಡೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ.

1908ರಲ್ಲಿ ಅಮೆರಿಕದಲ್ಲಿ ಮಹಿಳಾ ಕಾರ್ಮಿಕರು ಉತ್ತಮ ದುಡಿಯುವ ಪರಿಸ್ಥಿತಿಗೆ ಒತ್ತಾಯಿಸಿ ನಡೆದ ಹೋರಾಟ ಮತ್ತು ಅದರ ನೆನಪಿಗಾಗಿ ವಿಶ್ವ ಮಹಿಳಾ ದಿನಾಚರಣೆ ನಡೆಯುತ್ತಿದೆ.

ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಮುಂತಾದ ಹಲವು ರಂಗಗಳಲ್ಲಿ ಅವರ ಸಾಧನೆಗಳನ್ನು ಗೌರವಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾದೇವಿ ನಾಯಕ್, ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮಮತಾ, ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಹೋಬಳಿ ಘಟದ ಕೋಶಾಧ್ಯಕ್ಷ ಜಿ.ಸುರೇಶ್ ಮುಂತಾದವರು ಭಾಗವಹಿಸಿದ್ದರು.

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯದ ಮಹಿಳಾ ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!