ಬೆಂ.ಗ್ರಾ.ಜಿಲ್ಲೆ; ಇಂದು ದೇವನಹಳ್ಳಿ (Devanahalli) ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ, ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನದಡಿ ಸುಮಾರು 2.66 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಚಾಲನೆ ನೀಡಿದರು.
ಕಸಬಾ ಹೋಬಳಿಯ ಜಾಲಿಗೆ ಗ್ರಾಪಂ ವ್ಯಾಪ್ತಿಯಲ್ಲಿ 50 ಲಕ್ಷ ಮೊತ್ತದ 05 ಕಾಮಗಾರಿ, ಆಲೂರು ದುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 103.82 ಲಕ್ಷ ಮೊತ್ತದ 10 ಕಾಮಗಾರಿ, ಬಿದಲೂರು ಗ್ರಾಪಂ ವ್ಯಾಪ್ತಿಯಲ್ಲಿ 57 ಲಕ್ಷದ 07 ಕಾಮಗಾರಿ.
ಆವತಿ ಗ್ರಾಪಂ ವ್ಯಾಪ್ತಿಯಲ್ಲಿ 56 ಲಕ್ಷ ಮೊತ್ತದ 07 ಕಾಮಗಾರಿ ಸೇರಿ ಒಟ್ಟು 266.82 ಲಕ್ಷ ಮೊತ್ತದ 29 ಕಾಮಗಾರಿಳನ್ನು ಒಳಗೊಂಡ ಕಾಂಕ್ರೀಟ್ ರಸ್ತೆ, ಚರಂಡಿ, ಸಮುದಾಯ ಭವನ, ಬಸ್ ನಿಲ್ದಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬಯಪ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಗನ್ನಾಥ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಸೇರಿದಂತೆ, ಆಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.