Drinking water problem likely in 98 residential areas: District Collector

ಜಿಲ್ಲೆಯ 98 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ: ಜಿಲ್ಲಾಧಿಕಾರಿ

ಬೆಂಗಳೂರು: ಮುಂದಿನ 3 ತಿಂಗಳುಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ (District Collector) ಎ.ಬಿ ಬಸವರಾಜು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ಪರಿಸ್ಥಿತಿ ನಿವಾರಣೆಗೆ ತಕ್ಷಣ ಪರಿಹಾರ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕುಗಳ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕಳೆದ 3 ರಿಂದ 5 ವರ್ಷಗಳಿಂದ ಹೆಚ್ಚಾಗಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಜನವಸತಿಗಳ ಆಧಾರದಲ್ಲಿ ಪ್ರಸಕ್ತ ವರ್ಷದ ಬೇಸಿಗೆ ಸಮಯದಲ್ಲಿ ಮಾರ್ಚ್‌ ರಿಂದ ಮೇ 2025 ರ ಅಂತ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ 98 ಜನವಸತಿಗಳನ್ನು ಗುರುತಿಸಲಾಗಿದೆ.

234 ಖಾಸಗಿ/ ರೈತರ ಕೊಳವೆ ಬಾವಿಗಳನ್ನು ಗುರುತಿಸಿ ಪರ್ಯಾಯವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ, ಪ್ರಸ್ತುತ JJM ಯೋಜನೆಯಡಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯಕವಿರುವ ಮೊತ್ತದ ತುರ್ತು ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ.

ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಮೇವಿನ ಬೀಜ ಕಿಟ್ ಗಳನ್ನು ರೈತರಿಗೆ ಪೂರೈಸಿ, ಈಗಾಗಲೇ ಗೋಶಾಲೆಗಳಲ್ಲಿ ಅಂದಾಜು 3 ಲಕ್ಷ ಟನ್ ರಷ್ಟು ಮೇವು ಮೇವು ಸಂಗ್ರಹಿಸಿಡಲಾಗಿದೆ ಎಂದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!