State as manufacturing hub: Industrial churn in April: MB Patila

ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ʻಉದ್ಯಮ ಮಂಥನʼ: ಎಂಬಿ ಪಾಟೀಲ

ಬೆಂಗಳೂರು: ರಾಜ್ಯವನ್ನು ಜಾಗತಿಕ ಮಟ್ಟದ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ಏಪ್ರಿಲ್‌ ಕೊನೆ ವಾರದಲ್ಲಿ ಎರಡು ದಿನಗಳ ʻಉದ್ಯಮ ಮಂಥನʼ ಕಾರ್ಯಕ್ರಮ ನಡೆಸಲಾಗುವುದು. ಇದರಲ್ಲಿ ಉತ್ಪಾದನಾ ವಲಯದಲ್ಲಿ ಮುಂಚೂಣಿಯಲ್ಲಿರುವ ಉದ್ದಿಮೆಗಳ ಮುಖ್ಯಸ್ಥರನ್ನು ಕರೆದು, ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ (MB Patila) ತಿಳಿಸಿದ್ದಾರೆ.

ವಿಧಾನಸೌದದ ತಮ್ಮ ಕಚೇರಿಯಲ್ಲಿ ಈ ಕುರಿತು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪ್ರಾಥಮಿಕ ಹಂತದ ಸಭೆ ನಡೆಸಿದರು.

ʻಈ ಕಾರ್ಯಕ್ರಮದಲ್ಲಿ ವಿದೇಶಗಳ ಗಣ್ಯ ಉದ್ಯಮಿಗಳು ಮತ್ತು ಹೂಡಿಕೆದಾರರು ಕೂಡ ಭಾಗವಹಿಸಲಿದ್ದಾರೆ. ಇಲ್ಲಿ ತಂತ್ರಜ್ಞಾನ, ಬಂಡವಾಳ ಹೂಡಿಕೆ, ನೀತಿ ನಿರೂಪಣೆಯಲ್ಲಿ ಆಗಬೇಕಾದ ಸುಧಾರಣೆಗಳು ಮತ್ತು ಉದ್ಯಮಗಳಿಗೆ ಒದಗಿಸಬೇಕಾದ ಸೌಲಭ್ಯಗಳನ್ನು ಕುರಿತು ಅಗತ್ಯ ಚರ್ಚೆ ನಡೆಸಲಾಗುವುದು.

ಸದ್ಯಕ್ಕೆ ಸೇವಾ ಮಾದರಿಯ ಚಟುವಟಿಕೆಗಳಿಗೆ ಹೆಸರಾಗಿರುವ ರಾಜ್ಯವನ್ನು ಉತ್ಪಾದನಾ ತಾಣವನ್ನಾಗಿ ಮಾಡಬೇಕಾದ ಸವಾಲು ನಮ್ಮ ಮುಂದಿದೆ. ಇದು ಸಾಧ್ಯವಾದರೆ, ರಾಜ್ಯದ ಆರ್ಥಿಕತೆಗೆ ಮತ್ತಷ್ಟು ಬಲ ಬರಲಿದೆʼ ಎಂದಿದ್ದಾರೆ.

ಮುಂದಿನ 6 ತಿಂಗಳಲ್ಲಿ ಕೈಗಾರಿಕಾ ಬೆಳವಣಿಗೆಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ಯೋಜನೆಗಳು ಮತ್ತು ಹೂಡಿಕೆ ಆಕರ್ಷಣೆಗೆ ತೆಗೆದುಕೊಳ್ಳಬೇಕಾದ ಉಪಕ್ರಮಗಳನ್ನು ಉದ್ಯಮ ಮಂಥನದ ಆಧಾರದ ಮೇಲೆ ತೆಗೆದುಕೊಳ್ಳಲಾಗುವುದು.

ಜತೆಗೆ ಉದ್ಯಮಗಳ ಸ್ಥಾಪನೆಗೆ ಭೂಮಿಯ ಲಭ್ಯತೆ, ಕೈಗಾರಿಕಾ ಮೂಲಸೌಕರ್ಯ ವೃದ್ಧಿಗೆ ಖಾಸಗಿ ಪಾಲುದಾರಿಕೆ, ಪ್ಲಗ್‌ & ಪ್ಲೇ ಮಾದರಿಯ ಸೌಲಭ್ಯ ಮತ್ತು ಕೆಲಸಗಾರರಿಗೆ ವಸತಿ ಸೌಕರ್ಯಕ್ಕಾಗಿ ಕೈಗಾರಿಕಾ ಡಾರ್ಮಿಟರಿ ಮುಂತಾದ ವಿಚಾರ ಕುರಿತು ಗಮನ ಹರಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಅಧಿಕಾರಿಗಳಿಗೆ ತರಬೇತಿ

ಇದಲ್ಲದೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿ ವರ್ಗಕ್ಕೆಗೆ ಸಂವಹನ, ಸರಕಾರದ ನೀತಿಗಳು, ಸಾಮಾಜಿಕ ಮಾಧ್ಯಮಗಳು, ಏಕಗವಾಕ್ಷಿ ವ್ಯವಸ್ಥೆ ಇತ್ಯಾದಿಗಳನ್ನು ಕುರಿತು ಎರಡು ಹಂತಗಳಲ್ಲಿ ತರಬೇತಿ ನೀಡಲಾಗುವುದು. ಈ ಸಂಬಂಧ ಈಗಾಗಲೇ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ತಾಂತ್ರಿಕ ನಿರ್ದೇಶಕ ರಮೇಶ ಮತ್ತಿತರರು ಸಭೆಯಲ್ಲಿ ಇದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!