ದೊಡ್ಡಬಳ್ಳಾಪುರ (Doddaballapura): ರಂಜಾನ್, ಯುಗಾದಿ ಮತ್ತು ಶ್ರೀರಾಮ ಶೋಭಾ ಯಾತ್ರೆ ಹಿನ್ನೆಲೆಯಲ್ಲಿ ಇಂದು ಪೊಲೀಸ್ ಇಲಾಖೆಯಿಂದ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ.
ಶುಕ್ರವಾರ (ಮಾ.28) ಮಧ್ಯಾಹ್ನ 3 ಗಂಟೆಗೆ ನಗರದ ಡಿ ಕ್ರಾಸ್ ಬಳಿಯಿರುವ ಬಾಬು ಜಗಜೀವನ್ ರಾಮ್ ಭವನದಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರ ನೇತೃತ್ವದಲ್ಲಿ ಈ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಡಿವೈಎಸ್ಪಿ ರವಿ ಸೇರಿದ ದೊಡ್ಡಬಳ್ಳಾಪುರ ಪೊಲೀಸ್ ಉಪ ವಿಭಾಗದ ವಿವಿಧ ಠಾಣೆಗಳ ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು ಭಾಗವಹಿಸಿದ್ದಾರೆ.