ಬೆಂಗಳೂರು: ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಕೆ ಬಾಬಾ (CK Baba) ಅವರಿಗೆ 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕ ದೊರೆತಿದೆ.
ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಧನಂಜಯ ಅವರು ಬರೆದಿರುವ ಪತ್ರದಲ್ಲಿ, 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕಗಳನ್ನು 219 ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಮುಖ್ಯಮಂತ್ರಿಯವರ ಪದಕ ನಿಯಮಗಳಲ್ಲಿ ನಿಗದಿಪಡಿಸಿರುವ ಎಲ್ಲಾ ಷರತ್ತುಗಳನ್ನು ಪೂರೈಸಿರುವ ಷರತ್ತಿಗೊಳಪಟ್ಟು ಮುಖ್ಯಮಂತ್ರಿಯವರ ಪದಕಗಳನ್ನು ನೀಡಲು ಸರ್ಕಾರ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.
ಈ ಪತ್ರದ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಸೇರಿದಂತೆ 219 ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಮುಖ್ಯಮಂತ್ರಿಯವರ ಪದಕ ದೊರೆತಿದೆ.
