ದೊಡ್ಡಬಳ್ಳಾಪುರ (Doddaballapura): ಇಂದು ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ 118 ಜಯಂತಿ.
ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಶ್ರಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಗಣ್ಯರು, ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಶಿವಕುಮಾರ ಸ್ವಾಮೀಜಿಗಳು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದರು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಹಿರಿಯರಾದ ಸೋಮರುದ್ರ ಶರ್ಮ, ಬಸವರಾಜು, ಮಲ್ಲಿಕಾರ್ಜುನ್, ಎಸ್ ಪ್ರಕಾಶ್, ಪುಟ್ಟಬಸವರಾಜು, ನಗರ ಸಭಾ ಅಧ್ಯಕ್ಷೆ ಸುಮಿತ್ರ ಆನಂದ್.
ಅಖಿಲ ಭಾರತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಸುಜಯ್, ತಾಲ್ಲೂಕು ಯುವ ಘಟಕ ಅಧ್ಯಕ್ಷ ಗಗನ್, ಮಹಾ ಸಭಾ ಯುವಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಲೋಕೇಶ್ ನಾಗಸಂದ್ರ, ಮಹಾಸಭಾ ಜಿಲ್ಲಾ ಉಪಾಧ್ಯಕ್ಷೆ ಲತಾ ಆರಾಧ್ಯ, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಕುಮಾರಿ ಮತ್ತಿತರರಿದ್ದರು.