BJP excluded from protest.. JDS outraged

ಪ್ರತಿಭಟನೆಯಿಂದ ಹೊರಗಿಟ್ಟ ಬಿಜೆಪಿ.. ಜೆಡಿಎಸ್ ಕಿಡಿ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ವಿರುದ್ಧ, ಶಾಸಕರ ಅಮಾನತು ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ (BJP) ಏಕಾಂಗಿಯಾಗಿ ಪ್ರತಿಭಟನೆಗಳನ್ನು ನಡೆಸುತ್ತಿರುವುದು ಮಿತ್ರ ಪಕ್ಷ ಜೆಡಿಎಸ್ (JDS) ಪಾಳೆಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ರೀತಿಯ ನಡೆಯಿಂದ ಮುಂದಿನ ದಿನಗಳಲ್ಲಿ ಪೆಟ್ಟು ಬೀಳಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ.

ಅಧಿವೇಶನದಲ್ಲಿ ಬಿಜೆಪಿ ಬಾವಿಗಿಳಿದು ಧರಣಿ ನಡೆಸಿದಾಗ, ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದಾಗ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿತ್ತು. ಆದರೆ, ನಂತರದಲ್ಲಿ ಬಿಜೆಪಿ ಏಕಾಂಗಿ ಪ್ರತಿಭಟನೆಗಳನ್ನು ನಡೆಸಿದ್ದು, ಜೆಡಿಎಸ್ ಅನ್ನು ಯಾವುದಕ್ಕೂ ಆಹ್ವಾನಿಸಿಲ್ಲ.

ಜೆಡಿಎಸ್ ಬೆಂಬಲ ಕೋರದೆ ಬಿಜೆಪಿ ಏಕಾಂಗಿಯಾಗಿ ಸರ್ಕಾರ ವಿರುದ್ದ ಬೀದಿಗಿಳಿಯುತ್ತಿದೆ.

ಸರ್ಕಾರದ ಬೆಲೆ ಏರಿಕೆ ಧೋರಣೆ ಖಂಡಿಸಿ ಬಿಜೆಪಿ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿದರೂ ಜೆಡಿಎಸ್‌ಗೆ ಆಹ್ವಾನ ನೀಡಿಲ್ಲ. ಅಲ್ಲದೆ, ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸುವ ವೇಳೆಯೂ ಜೆಡಿಎಸ್‌ಗೆ ಮಾಹಿತಿ ನೀಡಲಿಲ್ಲ. ಇದು ಜೆಡಿಎಸ್ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ನಡೆಗೆ ಜೆಡಿಎಸ್‌ನಲ್ಲಿ ಬೇಸರ ಮೂಡಿದೆ.

ಧರಣಿಗೆ ಆಹ್ವಾನ ನೀಡಿಲ್ಲ

ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಬಾಬು, ಬಿಜೆಪಿಯವರು ನಡೆಸುತ್ತಿರುವ ಧರಣಿ ಸಂಬಂಧ ನಮಗೆ ಯಾವುದೇ ಆಹ್ವಾನ ಕೊಟ್ಟಿಲ್ಲ ಎಂದಿದ್ದಾರೆ.

ಎನ್‌ಡಿಎ ಭಾಗವಾಗಿರುವ ಎರಡೂ ಪಕ್ಷಗಳ ನಡುವೆ ಸಮನ್ವಯ ಇರಬೇಕು. ಆಗ ಮಾತ್ರ ಹೋರಾಟ, ಕಾರ್ಯಕ್ರಮಗಳು ಯಶಸ್ವಿಯಾಗಲಿವೆ. ಬಿಜೆಪಿಯವರಿಗೆ ತಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಸ್ಥಳೀಯ ಪಕ್ಷವನ್ನು ಯಾಕೆ ಕೇಳಬೇಕು ಎಂಬ ಮನೋಭಾವ ಇದ್ದರೆ ಅದು ತಪ್ಪು. ಈ ರೀತಿಯ ನಡೆಯಿಂದ ಮುಂದಿನ ದಿನದಲ್ಲಿ ಪೆಟ್ಟು ಬೀಳಲಿದೆ ಎಂದು ಎಚ್ಚರಿಕೆ ನೀಡಿದರು.

ಸದನದಲ್ಲಿ ಸರ್ಕಾರದ ವಿರುದ್ಧದ ಹೋರಾಟಕ್ಕೆ ಬಿಜೆಪಿ ಜತೆ ಎಲ್ಲಾ ರೀತಿಯಲ್ಲೂ ಕೈ ಜೋಡಿಸಲಾಗಿತ್ತು. ಆದರೂ ಬಿಜೆಪಿ ನಡೆಸುತ್ತಿರುವ ಧರಣಿಗೆ ಆಹ್ವಾನ ನೀಡುತ್ತಿಲ್ಲ. ಇದೇ ತಿಂಗಳು 7 ರಿಂದ ಜನಾಕ್ರೋಶ ನಡೆಸುತ್ತಿದ್ದು, ಅದರ ಬಗ್ಗೆಯೂ ಚರ್ಚೆ ನಡೆಸಿಲ್ಲ.

ಸರ್ಕಾರ ವಿರುದ್ಧ ಒಟ್ಟಿಗೆ ಪ್ರತಿಭಟನೆ ನಡೆಸಿದರೆ ಜನತೆಗೆ ಮತ್ತಷ್ಟು ಜಾಗೃತಿ ಮೂಡಿಸಲು ಸಾಧ್ಯ. ಆದರೆ, ಜೆಡಿಎಸ್ ಅನ್ನು ಯಾವುದೇ ಪ್ರತಿಭಟನೆಗೆ ಆಹ್ವಾನ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!