
ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 05 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380220884, 9380162041, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


