LPG price hike is not only for Karnataka but for the entire country: R. Ashoka

LPG ಬೆಲೆ ಏರಿಕೆ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಆಗಿದೆ: ಆರ್‌.ಅಶೋಕ ಬೇಕಾಬಿಟ್ಟಿ ಮಾತು

ಬೆಂಗಳೂರು: ಒಂದೆಡೆ ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ, ರಾಜ್ಯ ಬಿಜೆಪಿ (BJP) ಮುಖಂಡರು ಕೇಂದ್ರ ಸರ್ಕಾರದ LPG ಬೆಲೆ ಏರಿಕೆ ಕುರಿತು ಸಮರ್ಥನೆಗಿಳಿದಿರುವ ಇಬ್ಬಗೆಯ ನೀತಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ ವಿಧಿಸಿದೆ. ಅಂದಮೇಲೆ ಜನರಿಗೆ ಇವರು ಕೊಟ್ಟಿದ್ದೇನು? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಚುನಾವಣೆಗೆ ಮುನ್ನ ಗ್ಯಾರಂಟಿಗಳ ಹಣ ಬಿಡುಗಡೆ ಮಾಡಿ ಜನರಿಗೆ ಆಮಿಷ ಒಡ್ಡುತ್ತಿದೆ. ಹಾಲು, ಮದ್ಯ, ಆಸ್ಪತ್ರೆ ಶುಲ್ಕ, ಬಸ್‌ ಟಿಕೆಟ್‌ ದರ, ಮಾರ್ಗಸೂಚಿ ದರ ಎಲ್ಲ ಸೇರಿದರೆ ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆಯನ್ನು ಹಾಕಲಾಗಿದೆ.

ಗ್ಯಾರಂಟಿಗಳ 65 ಸಾವಿರ ಕೋಟಿ ರೂ. ಹೊಂದಿಸಲು ಹೀಗೆ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಇವರು ಜನರಿಗೆ ಏನು ಕೊಟ್ಟಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಅಡುಗೆ ಅನಿಲಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿ ಹೆಚ್ಚು ಸಹಾಯಧನ ನೀಡುತ್ತಿದೆ. ಅತಿ ಕನಿಷ್ಠ ಮಟ್ಟದಲ್ಲಿ ಕೇಂದ್ರ ಸರ್ಕಾರ ದರ ಏರಿಕೆ ಮಾಡಿದೆ. ಕಾಂಗ್ರೆಸ್‌ನವರು ಬೇಕಿದ್ದರೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲಿ. ಇಡೀ ದೇಶದಲ್ಲಿ ಅಡುಗೆ ಅನಿಲ ಏರಿಕೆಯಾಗಿದೆಯೇ ಹೊರತು ಕರ್ನಾಟಕಕ್ಕೆ ಮಾತ್ರ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿದುಕೊಳ್ಳಬೇಕು. ರಾಜ್ಯ ಸರ್ಕಾರದಲ್ಲಿ ಸರ್ಕಾರಿ ನೌಕರರಿಗೂ ವೇತನ ಕೊಡಲು ಹಣವಿಲ್ಲ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಸಂಬಳ ಕೊಡಲು ಹಣವಿಲ್ಲ ಎಂದಮೇಲೆ ಈ ಸರ್ಕಾರ ದಿವಾಳಿಯಾಗಿದೆ ಎಂದೇ ಹೇಳಬೇಕು. ಒಂದೇ ವರ್ಷದಲ್ಲಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಪಾಪರ್‌ ಆಗಿಲ್ಲವಾದರೆ ಸಾಲ ಏಕೆ ಮಾಡಬೇಕು? ಕೇಜ್ರಿವಾಲ್‌ ಅವರನ್ನು ಮೀರಿಸುವಂತೆ ಅಬಕಾರಿ ಹಗರಣ ರಾಜ್ಯದಲ್ಲಿ ನಡೆಯುತ್ತಿದೆ ಎಂದು ದೂರಿದರು.

ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ನಾಯಕರ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಭೂ ಹಗರಣವನ್ನು ಪೊಲೀಸರು ತನಿಖೆ ಮಾಡುವುದನ್ನು ನೋಡಿದರೆ ಕಾಂಗ್ರೆಸ್‌ ದ್ವೇಷ ಸಾಧಿಸುತ್ತಿದೆ ಎಂದು ಗೊತ್ತಾಗುತ್ತದೆ. ಕುಮಾರಸ್ವಾಮಿ ಅವರ ಕಾನೂನು ಹೋರಾಟಕ್ಕೆ ನಾವೆಲ್ಲರೂ ಬೆಂಬಲ ನೀಡುತ್ತೇವೆ ಎಂದರು.

ಜೆಡಿಎಸ್‌-ಬಿಜೆಪಿ ಒಟ್ಟಾಗಿ ಹೋರಾಟ ಮಾಡುವುದರ ಬಗ್ಗೆ ಚರ್ಚೆಯಾಗಬೇಕಿದೆ. ಈ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಹಾಗೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಮಂಡ್ಯದ ಜನರು ಚಕ್ರವರ್ತಿಗಳು, ಛತ್ರಿಗಳಲ್ಲ

ಬಿಜೆಪಿ ಜನಾಕ್ರೋಶ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 14 ಸೈಟು ಲೂಟಿ ಮಾಡಿ, ಬಿಜೆಪಿ ಹೋರಾಟ ಮಾಡುತ್ತಿದ್ದಂತೆ ವಾಪಾಸು ಮಾಡಿದರು. ವಾಲ್ಮೀಕಿ ನಿಗಮದ ಅಕ್ರಮದ ವಿರುದ್ಧದ ಹೋರಾಟದಿಂದ ಸಚಿವರು ರಾಜೀನಾಮೆ ನೀಡಿದರು. ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಮಂಡ್ಯದ ಜನರನ್ನು ಛತ್ರಿ ಎಂದು ಜರಿದಿದ್ದಾರೆ. ಅದೇ ಚುನಾವಣೆಯ ಸಮಯದಲ್ಲಿ ಮತಭಿಕ್ಷೆ ಬೇಡಿದ್ದರು. ಮಂಡ್ಯದ ಜನರು ಛತ್ರಿಗಳಲ್ಲ, ಚಕ್ರವರ್ತಿಗಳು. ಮುಂದಿನ ಚುನಾವಣೆಯಲ್ಲಿ ಮಂಡ್ಯದ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದರು.

ಮೇಕೆದಾಟು ಯೋಜನೆ ಜಾರಿ ಬಗ್ಗೆ ಕಾಂಗ್ರೆಸ್‌ ನಾಯಕರು ಹೇಳಿದ್ದರು. ಆದರೆ ಅಧಿಕಾರ ಸಿಕ್ಕರೂ ಇನ್ನೂ ದಾಟಿಲ್ಲ. ತಮಿಳುನಾಡಿನ ಸ್ಟಾಲಿನ್‌ ಬ್ರದರ್‌ ಎಂಬ ಕಾರಣಕ್ಕೆ ಇವರು ಸುಮ್ಮನಾಗಿದ್ದಾರೆ. ಮಂಡ್ಯದಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಮೋದಿ ಸರ್ಕಾರ ಅನುದಾನ ನೀಡಿದ್ದರೆ, ಆ ಹಣವನ್ನು ತಿಂದು ವಿವಿ ರದ್ದು ಮಾಡಿದ್ದಾರೆ. ಇಲ್ಲಿ ಹನುಮ ಧ್ವಜವನ್ನು ಹಾರಿಸಲು ಹೊರಟರೆ ಅದಕ್ಕೂ ಅವಕಾಶ ನೀಡಲಿಲ್ಲ. ಆದರೂ ಡಿ.ಕೆ.ಶಿವಕುಮಾರ್‌ ಹಿಂದೂ ಎಂದು ಹೇಳಿಕೊಳ್ಳುತ್ತಾರೆ ಎಂದು ಟೀಕಿಸಿದರು.

ಮಂಡ್ಯದ ಜನರಿಗೆ ಕಾಂಗ್ರೆಸ್‌ ದೊಡ್ಡ ಮೋಸ ಮಾಡಿದೆ. ಮುಸ್ಲಿಮರಿಗೆ ಮದುವೆಯಾಗಲು ಕೂಡ ಕೂಡಲೇ ಹಣ ನೀಡುತ್ತಾರೆ. ಸರ್ಕಾರಿ ಗುತ್ತಿಗೆಯಲ್ಲೂ ಮೀಸಲು ನೀಡಿದ್ದಾರೆ. ಹಿಂದೂಗಳಿಗೆ ಮಾತ್ರ ಚೊಂಬು ಕೊಟ್ಟಿದ್ದಾರೆ. ಸಮಬಾಳು, ಸಮಪಾಲು ಎಂದು ಬಿಜೆಪಿ ಹೇಳಿದರೆ, ಕಾಂಗ್ರೆಸ್‌ ಎಲ್ಲವನ್ನೂ ಮುಸ್ಲಿಮರಿಗೆ ಮಾತ್ರ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!