Astrology: Likely to be a memorable day

ದಿನ ಭವಿಷ್ಯ, ಏ.10: ಈ ರಾಶಿಯವರಿಗೆ ಮೋಸವಾಗುವ ಸಾಧ್ಯತೆ ಇದೆ ಎಚ್ಚರ

Astrology: ಗುರುವಾರ, ಏಪ್ರಿಲ್ 10, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. (ಭಕ್ತಿ ಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಇಷ್ಟಾರ್ಥಗಳು ಈಡೇರಬಹುದು. ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಅರ್ಧ ನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ
ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]