helicopter breaks apart midair and crashes into New York City’s Hudson River.

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ನ್ಯೂಯಾರ್ಕ್: ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ (helicopter) ಪತನಗೊಂಡು‌ ನದಿಗೆ ಬಿದ್ದ ಪರಿಣಾಮ ಪೈಲಟ್‌ ಸೇರಿದಂತೆ ಆರು ಮಂದಿ ಸಾವಿಗೀರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ.

ಮೃತರಲ್ಲಿ ನಾಲ್ವರು ಸ್ಪ್ಯಾನಿಷ್ ಮೂಲದ ಒಂದೇ ಕುಟುಂಬದವರಾಗಿದ್ದು, ಪ್ರವಾಸಕ್ಕಾಗಿ ನ್ಯೂಯಾರ್ಕ್‌ಗೆ ಬಂದಿದ್ದರು. ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಲೋವರ್​​ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್​​, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್​​ನತ್ತ ಹೊರಟಿತ್ತು.

ಈ ಸಂದರ್ಭದಲ್ಲಿ ಏಕಾಏಕಿ ದಕ್ಷಿಣಕ್ಕೆ ತಿರುಗಿದ ಹೆಲಿಕಾಪ್ಟರ್ ನ್ಯೂಜೆರ್ಸಿ ಬಳಿ ನದಿಗೆ ಬಿದ್ದಿದೆ.

ಹೆಲಿಕಾಪ್ಟರ್‌ ಪತನದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಡಿಯೋದಲ್ಲಿ ಬೆಲ್ 206 ಹೆಲಿಕಾಪ್ಟರ್‌ನ ಪತನಗೊಂಡ ಭಾಗಗಳು ಹಡ್ಸನ್ ನದಿಗೆ ಬೀಳುವುದನ್ನು ನೋಡಬಹುದಾಗಿದೆ. ಅಲ್ಲದೇ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್ ತುಂಡಾಗಿ ನದಿಗೆ ಮೊದಲು ಬಿದ್ದಿದೆ. ಬಳಿಕ ಪಕ್ಕದಲ್ಲಿ ಹೆಲಿಕಾಪ್ಟರ್‌ ನದಿಗೆ ಬಿದ್ದಿದೆ.

ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಕೈಪೋರ್ಟ್‌ನಿಂದ ಹೊರಟು, ಹಾರಿ ಮ್ಯಾನ್‌ಹ್ಯಾಟನ್ ತೀರದ ಜಾರ್ಜ್ ವಾಷಿಂಗ್ಟನ್ ಸೇತುವೆ ಬಳಿ ಬಂದು ತಲುಪಿತ್ತು. ನಂತರ ಅದು ಡೌನ್‌ಟೌನ್ ಮ್ಯಾನ್‌ಹ್ಯಾಟನ್ ಹೆಲಿಪೋರ್ಟ್ ಕಡೆಗೆ ಹಿಂತಿರುಗುವಾಗ ನಿಯಂತ್ರಣ ಕಳೆದುಕೊಂಡು ನದಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. ಇನ್ನೂ ಯಾಂತ್ರಿಕ ವೈಫಲ್ಯದಿಂದ ಅಪಘಾತ ಸಂಭವಿಸಿದ್ದು, ಪೈಲಟ್‌ಗೆ ವಿಮಾನವನ್ನು ಉಳಿಸಲು ಯಾವುದೇ ಅವಕಾಶವಿರಲಿಲ್ಲ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಇಂದಿನ ಸಿಎಂ ಆಡಳಿತದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಆಗಿದೆ. ದಿನಕ್ಕೆ 300 ಕೋಟಿ ಸಾಲ ಆಗ್ತಿದೆ . ಈ ಸರ್ಕಾರ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ‌ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ

[ccc_my_favorite_select_button post_id="119448"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!