JDS protest: JDS power show at Freedom Park led by Nikhil Kumaraswamy

Jds protest: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ (Jds protest) ನಡೆಸಿತು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದರಾದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಅಧಿಕಾರಕ್ಕೆ ಬಂದಾಗಿನಿಂದ ದರ ಏರಿಕೆ

ಸುರೇಶ್ ಬಾಬು, ಹೆಚ್.ಡಿ. ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಹಿರಿಯ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಎ ತಿಪ್ಪೇಸ್ವಾಮಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿ ಮುನೇಗೌಡ ಸೇರಿದಂತೆ ಅನೇಕ ಮುಖಂಡರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಐದು ಗ್ಯಾರಂಟಿ ಕೊಟ್ಟಿದೆ ನಿಜ. ಆದರೆ, ಗ್ಯಾರಂಟಿ ಪಡೆದ ಪಾಪಕ್ಕೆ ಜನರು ದಿನನಿತ್ಯ ಬೆಲೆ ಏರಿಕೆ ಬರೆಗೆ ತುತ್ತಾಗುತ್ತಿದ್ದಾರೆ. ದಿನಕ್ಕೊಂದು ದರ ಏರಿಕೆ ಮಾಡುತ್ತಿದ್ದಾರೆ. ಕೊಟ್ಟಿದ್ದು ಅಲ್ಪ, ಜನರ ಮೇಲೆ ಬೆಟ್ಟದಷ್ಟು ಹೇರಿಕೆ ಮಾಡಿದ್ದಾರೆ. ಇದನ್ನು ಸಹಿಸುವ ಅಗತ್ಯ ಇಲ್ಲ. ಜನರು ಸರ್ಕಾರದ ವಿರುದ್ಧ ದಂಗೆ ಏಳದೇ ಬೇರೆ ದಾರಿ ಇಲ್ಲ ಎಂದು ನಾಯಕರು ಹೇಳಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಎಲ್ಲೆಡೆ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಫಲಕಗಳು ರಾರಾಜಿಸಿದವು.

ವಿಧಾನಸೌಧ ಮುತ್ತಿಗೆ ಯತ್ನಿಸಿದ ನಾಯಕರ ಬಂಧನ, ಬಿಡುಗಡೆ

ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಈ ಸಂದರ್ಭದಲ್ಲಿ ಅಡ್ಡಗಟ್ಟಿದ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಯಿಂದ ಶಾಸಕರಿಗೆ ನೇರ ಆಮಿಷ

ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಶಾಸಕರಿಗೆ ಆಮಿಷ ಒಡ್ಡುತ್ತಿರುವ ಬಗ್ಗೆ ನೇರ ಆರೋಪವನ್ನೇ ಮಾಡಿದರು.

ನಾನು ನನ್ನ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಕಾಲೇಜು ಕೊಡಿ ಎಂದು ಕೇಳಿದರೆ ಕಾಂಗ್ರೆಸ್ ಪಕ್ಷಕ್ಕೆ ಬಾ ಎಂದು ಕರೆಯುತ್ತಾರೆ ಸಿದ್ದರಾಮಯ್ಯ. ಒಬ್ಬ ಮುಖ್ಯಮಂತ್ರಿ ಹೀಗೆ ಮಾಡಬಹುದಾ? ಎಂದು ಬೇಸರ ವ್ಯಕ್ತಪಡಿಸಿದರು ಅವರು.

ನಾವು ಎಂಎಲ್ಎ ಗಳಾಗಿ ಎರಡು ವರ್ಷವಾಯಿತು. ಕ್ಷೇತ್ರಗಳ ಅಭಿವೃದ್ಧಿಗೆ ಕೊನೆಪಕ್ಷ ₹50 ಕೋಟಿ ಕೊಟ್ಟಿಲ್ಲ. ಒಂದು ರಸ್ತೆಯ ಗುಂಡಿ ಮುಚ್ಚೋಕೆ ದುಡ್ಡು ಕೊಡುತ್ತಿಲ್ಲ. ಬರೀ ಲೂಟಿ ಬಿಟ್ಟರೆ ಬರೀ ಏನು ಮಾಡುತ್ತಿಲ್ಲ. ಇದು ದಾರಿದ್ರ್ಯ ಸರ್ಕಾರ.

ಗುಂಡಿ ಮುಚ್ಚೋಕೆ ಯೋಗ್ಯತೆ ಇಲ್ಲದವರು ಎರಡು ಸಾವಿರ ದುಡ್ಡು ಕೊಡ್ತಾರೆ. ಪಾಲಿಟೆಕ್ನಿಕ್ ಕಾಲೇಜು ಕೇಳಿದ್ರೆ ಕಾಂಗ್ರೆಸ್ ಗೆ ಬಾ ಅಂತಾರೆ ಸಿದ್ದರಾಮಯ್ಯ. ಯಾಕಪ್ಪ ಕಾಂಗ್ರೆಸ್ಸೂ..? ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ. ನಾನು ಇನ್ನೂ ಇಪ್ಪತ್ತು ವರ್ಷಗಳಾದರೂ ಜೆಡಿಎಸ್ ನಲ್ಲಿಯೇ ಇರುತ್ತೇನೆ ಎಂದು ಅವರು ಹೇಳಿದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!