There is a big conspiracy against Dharmasthala: DCM D.K. Shivakumar

ಜಾತಿ ಗಣತಿ.. ಇಂದು ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ

ಬೆಂಗಳೂರು (harithalekhani) ; “ಜಾತಿ ಗಣತಿ ವಿಚಾರವಾಗಿ ಇಂದು ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು.

ಜಾತಿ ಗಣತಿ ವರದಿ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ, “ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ಇಂದು ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ” ಎಂದು ತಿಳಿಸಿದರು.

ಇಂದು ಸಂಜೆ ಸಭೆ

ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಅವರ ಸರ್ಕಾರಿ ನಿವಾಸದಲ್ಲಿ ದಿನಾಂಕ 15-04-2025 ರಂದು ಮಂಗಳವಾರ ಸಂಜೆ 6.00 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ಕರೆಯಲಾಗಿದೆ.

ಎಲ್ಲರಿಗೂ ನ್ಯಾಯ ಒದಗಿಸುವ ಪಕ್ಷ ಕಾಂಗ್ರೆಸ್

ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರ್ಕಾರ ಕಸಿಯುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ.

ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ” ಎಂದರು.

ಒಬಿಸಿಗಳ ಮೀಸಲಾತಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷ ಕಾರಿದ್ದರು. ಆದರೆ ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ” ಎಂದು ಹೇಳಿದರು.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!