GST reform; Modi government's Diwali gift to the people of the country: H.D. Kumaraswamy happy

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು (harithalekhani) : ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ ಕೇಂದ್ರ ಸಚಿವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಕೇಳಿದ್ದಾರೆ.

ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು (!?) ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ!! ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಅವರು ಹೇಳಿದ್ದಾರೆ.

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಶಂಕೆ ವ್ಯಕ್ತಪಡಿಸಿರುವ ಅವರು, ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪೆನ್ನೂ ಪೇಪರ್ ಕೇಳಿದ್ದ ಡಿಕೆಶಿಗೆ ಟಾಂಗ್

ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್‌ ಸಲ ನಂಗೂ ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ!! ಶಿವ.. ಶಿವಾ.. ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.

‘ನಾನ್‌ ಒಂದು ನ್ಯಾಷನಲ್ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ.. ನಂಗೆ ಎಲ್ರೂ ಸಮಾನ! ಈಗಷ್ಟೇ ಕಣ್‌ ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿ?ʼ ಎಂದ್ಹೇಳಿ ಪ್ರಶ್ನಿಸಿದ ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ..? ಪೆನ್ನೂ ಪೇಪರ್‌ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ.

ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ!! ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ; ಈ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117673"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!