
ಬೆಂ.ಗ್ರಾ.ಜಿಲ್ಲೆ (Harithalekhani): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ (Applications invited) 6ನೇ ತರಗತಿಗೆ ದಾಖಲು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಪಡೆಯಬಹುದಾಗಿದೆ.
ಮೇ 3ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಷರತ್ತುಗಳು
ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
2024 25 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2,50,000 ಗಳು ಒಳಗಿರಬೇಕು. ತಹಶೀಲ್ದಾರ್ ರವರಿಂದ ಪಡೆದ ಜಾತಿ ಮತ್ತು ಆದಾಯ ಪತ್ರ ಕಡ್ಡಾಯವಾಗಿ ಲಗತಿಸಬೇಕು.
ಪ್ರತಿಷ್ಠಿತ ಶಾಲೆಗಳಿಗೆ ಒಮ್ಮೆ ದಾಖಲಾದ ವಿದ್ಯಾರ್ಥಿಗಳು 10 ಅಥವಾ 12ನೇ ತರಗತಿಯವರೆಗೆ ದಾಖಲಾದ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮುಂದುವರಿಸುವುದು
10ನೇ ತರಗತಿ ವ್ಯಾಸಂಗ ಪೂರ್ಣಗೊಳಿಸಿದ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಪ್ರತಿಷ್ಠಿತ ಶಾಲೆಯಲ್ಲಿ ಪಿಯುಸಿ ತರಗತಿಯನ್ನು ನಡೆಸದೇ ಇದ್ದಲ್ಲಿ ಅದೇ ಜಿಲ್ಲೆಯಲ್ಲಿನ ಪಿಯುಸಿ ಇರುವ ಪ್ರತಿಷ್ಠಿತ ಶಾಲೆ ಅಥವಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.
ಪ್ರವೇಶ ಪರೀಕ್ಷೆಯನ್ನು ಡಯಟ್ ಮೂಲಕ ನಡೆಸಿ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು.
ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಈ ಕೆಳಕಂಡ ಅತಿ ಹಿಂದುಳಿದ ವರ್ಗದವರಿಗೆ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ.
ಸಫಾಯಿ ಕರ್ಮಚಾರಿ ಗಳ ಮಕ್ಕಳು,ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರ ಮಕ್ಕಳು, ಕೋವಿಡ್ 19 ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು, ಸಿಂಗಲ್ ಫ್ಯಾಮಿಲಿ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಯಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲವಾದದಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೋಂದವರ ಮಕ್ಕಳು, ಜೀತ ವಿಮುಕ್ತ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂ.ಸಂ. 080-29787448 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						