ದೊಡ್ಡಬಳ್ಳಾಪುರ (Harithalekhani): ನಗರ ಬೆಸ್ಕಾಂ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ, ಏಪ್ರಿಲ್.21ರ ಸೋಮವಾರದಂದು ಬೆಳಗ್ಗೆ 10ರಿಂದ ಸಂಜೆ 6ಗಂಟೆಗೆಯ ವರೆಗೆ ವಿದ್ಯುತ್ ವ್ಯತ್ಯಯ (Power cut) ಉಂಟಾಗಲಿದೆ ಬೆಸ್ಕಾಂ ಇಲಾಖೆಯ ಎಇಇ ವಿನಯ್ ಕುಮಾರ್ ಹೆಚ್‌ಪಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಪೂರೈಕೆಯಾಗುವ F07-Local-1 ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ F07-Local-1 ಫೀಡರ್ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು
ದೊಡ್ಡಬಳ್ಳಾಪುರ ನಗರದ ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)