Take action against those who throw garbage from the attic; Lokayukta Justice BS Patil

ಬೇಕಾಬಿಟ್ಟಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಿ; ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಬೆಂಗಳೂರು: ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ (BS Patil) ಸೂಚಿಸಿದರು.

ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಶುಕ್ರವಾರ ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು.

ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಗುತ್ತಿದೆ. ನಗರದಲ್ಲಿ ಒಟ್ಟು ಎರಡು ಲಕ್ಷ ಎಪ್ಪತೊಂಭತ್ತು ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು, ಇವುಗಳಲಗಲಿ ಮೂವತ್ತೈದು ಸಾವಿರಕ್ಕೂ ಹೆಚ್ಚು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಲಾಗಿದೆ.

ಇದಕ್ಕೆ ಸರ್ಕಾರದಿಂದ 60 ಕೋಟಿ ಅನುದಾನ ದೊರೆತಿದ್ದು, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸಹಯೋಗದಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ ನಂತರ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು, ನಗರ ಪ್ರದೇಶ ಅಷ್ಟೇ ಅಲ್ಲದೆ ಗ್ರಾಮಪಂಚಾಯತಿ ಮಟ್ಟದಲ್ಲಿಯೂ ಸಹ ಈ ಕಾರ್ಯಕ್ರಮಗಳನ್ನು ರೂಪಿಸಬೇಕು. ಇದರಲ್ಲಿ ಸಾರ್ವಜನಿಕರ ಸಹಭಾಗಿತ್ವ, ಸಂವಹನ ಸಹ ಮುಖ್ಯ. ಪ್ರಾಣಿಗಳಿಗೆ ಕ್ರೌರ್ಯ ತೋರದೆ ಸಹನೆಯಿಂದ ವರ್ತಿಸಬೇಕೆಂದು ತಿಳಿಸಿದರು.

ಕೆರೆ ಮಾಲಿನ್ಯ, ಘನತ್ಯಾಜ್ಯ ಕೆರೆಗಳಿಗೆ ಪ್ರವೇಶಿಸುವುದನ್ನು ತಡೆಯಲು ಬಿ.ಬಿ.ಎಂ.ಪಿ. ಹಾಗೂ ಜಲಮಂಡಳಿಯ ಅಧಿಕಾರಿಗಳು ಜಂಟಿಯಾಗಿ ಕೆಲಸ ನಿರ್ವಹಿಸಬೇಕು. ಜಕ್ಕೂರು ಕೆರೆಯನ್ನು ತ್ಯಾಜ್ಯ ಮುಕ್ತ ಕೆರೆಯನ್ನಾಗಿ ಮಾಡಬೇಕು ಎಂದರು.

ಕಸ ವಿಲೇವಾರಿ ಕುರಿತು ಬಿ.ಬಿ.ಎಂ.ಪಿ ಹಣಕಾಸು ಹಾಗೂ ಕಸ ವಿಲೇವಾರಿ ವಿಭಾಗದ ವಿಶೇಷ ಆಯುಕ್ತರಾದ ಕೆ. ಹರೀಶ್ ಕುಮಾರ್ ಮಾತನಾಡಿ, ಹಸಿಕಸ, ಒಣಕಸ ಹಾಗೂ ನೈರ್ಮಲ್ಯ ತ್ಯಾಜ್ಯಗಳನ್ನು ಬಿ.ಬಿ.ಎಂ.ಪಿ ವತಿಯಿಂದ “ಮನೆಯಿಂದ ಮನೆಗೆ” ಸಂಗ್ರಹ ಮಾಡಲಾಗುತ್ತಿದೆ.

100 ಕೆ.ಜಿ.ಗಿಂತ ಹೆಚ್ಚಾಗಿ ಉತ್ಪಾದನೆಯಾದ ಕಸವನ್ನು ಸಗಟು ಕಸ ಎಂದು ಪರಿಗಣಿಸಲಾಗುವುದು. ಬಹುತೇಕರು ಸಗಟು ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದರಿಂದ ಕಸ ವಿಲೇವಾರಿಯಲ್ಲಿ ತೊಡಕಾಗುತ್ತದೆ. ಕಸ ವಿಲೇವಾರಿ ನಿರ್ವಹನೆಗೆ 24 ಗಂಟೆಗಳ ಕಮಾಂಡ್ ಸೆಂಟರ್ ಕಾರ್ಯ ನಿರ್ವಹಿಸುತ್ತದೆ. ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಕೆಲಸವನ್ನು ಬಿ.ಬಿ.ಎಂಪಿ ಮಾಡಿದೆ ಎಂದರು.

ಕಸ ವಿಲೇವಾರಿಗೆ ಈಗ ಹೊಸ ರೂಪವನ್ನು ನೀಡಲಾಗುವುದು. ತಂತ್ರಜ್ಞಾನ ಹಾಗೂ ಕೃತಕ ಬುದ್ದಿಮತ್ತೆ ಆಧಾರಿತ ವಿಧಾನಗಳನ್ನು ಅಳವಡಿಸುವ ಚಿಂತನೆ ನಡೆಯುತ್ತಿದೆ. ಸಾರ್ವಜನಿಕರಿಂದ ಕಸ ವಿಲೇವಾರಿಗೆ ಸಂಗ್ರಹವಾದ ಹಣ ಹಾಗೂ ಆಸ್ತಿ ತೆರಿಗೆ ಹಣವನ್ನು ಸಹ ಇದಕ್ಕೆ ಸದಬಳಕೆ ಮಾಡಿಕೊಳ್ಳಲಾಗುವುದು. ರಸ್ತೆಗಳನ್ನು ಶುಚಿಯಾಗಿಟ್ಟು, ನಿಗದಿತ ಸಮಯದಲ್ಲಿ ಸಂಪನ್ಮೂಲ ಬಳಸಿ ಸಮರ್ಪಕವಾಗಿ ನಾವು ಕೆಲಸ ನಿರ್ವಹಿಸಬೇಕೆಂದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕಯುಕ್ತ ನ್ಯಾಯಮೂರ್ತಿಗಳು ಕಸ ವಿಲೇವಾರಿಯಲ್ಲಿ ಯಾವುದೇ ಲೋಪವಾಗದಂತೆ ಬಿ.ಬಿ.ಎಂಪಿ ನಿಗದಿತ ಗುರಿ ಮುಟ್ಟಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ನಡೆಯಬೇಕು. ಬೇಕಾಬಿಟ್ಟಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ನ್ಯಾಯಮೂರ್ತಿಗಳಾದ ಶ್ರೀನಾಥ್. ಕೆ ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!