Yettinahole water to be supplied to Bengaluru rural district soon; DK Shivakumar

ಶೀಘ್ರದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ ನೀರು; ಡಿಕೆ ಶಿವಕುಮಾರ್

ಬೆಂ.ಗ್ರಾ‌.ಜಿಲ್ಲೆ: ಎತ್ತಿನಹೊಳೆ ನೀರನ್ನು ಬಯಲು ಸೀಮೆ ಪ್ರದೇಶಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆದಷ್ಟು ಶೀಘ್ರ ಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು‌.

ಭಾನುವಾರ ದೇವನಹಳ್ಳಿ ತಾಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾತ್ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಹಿಂದುಳಿದವರಗೆ, ಎಲ್ಲಾ ವರ್ಗದ ವರೆಗೂ ಅನುಕೂಲವಾಗಿದೆ. ಆದರೆ ವಿರೋಧ ಪಕ್ಷದವರು ಸುಖಾಸುಮ್ಮನೆ ಪ್ರತಿಭಟನೆ ಮಾಡ್ತಿದಾರೆ. ಕುಟುಂಬದ ಯಶಸ್ಸು, ಜೀವನದ ಯಶಸ್ಸಿಗೆ ನಾವು ಗ್ಯಾರಂಟಿಗಳನ್ನು ನೀಡಿದ್ದೇವೆ.

ಎತ್ತಿನಹೊಳೆ ನೀರನ್ನು ಬಯಲು ಸೀಮೆ ಪ್ರದೇಶಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಗ್ರಾಮಾಂತರ ಜಿಲ್ಲೆಗೆ ಆದಷ್ಟು ಶೀಘ್ರ ಹರಿಸಲಾಗುವುದು ಎಂದರು.

ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಚುನಾವಣಾ ಸಮಯದಲ್ಲಿ ಕೊಟ್ಟ ಮಾತಿನಂತೆ ಸಿಎಂ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಜತೆಗೆ ಸಾವಿರಾರೂ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಜನಪರ ಮೆಚ್ಚುಗೆ ಗಳಿಸಿದೆ. .

ಬೆಂಗಳೂರು ಗ್ರಾಮಾಂತರಕ್ಕೆ ಜಿಲ್ಲಾ ಕೇಂದ್ರ ಹಾಗೂ ಜಿಲ್ಲಾ ಆಡಳಿತ ಸಂಕೀರಣವನ್ನು ಮಾಡಿಸಿದ್ದು ಕಾಂಗ್ರೆಸ್ ಸರ್ಕಾರವೇ. ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರದ ಸಹಕಾರ ಇರುತ್ತದೆ ಎಂದು ಹೇಳಿದರು.

ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಜಮೀರ ಅಹ್ಮದ್ ಖಾನ್ ಮಾತನಾಡಿ, ಜಿಲ್ಲೆಯ ವಸತಿ ರಹಿತ ಬಡವರಿಗಾಗಿ 2500 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ.

ಅಲ್ಲದೆ ಅಲ್ಪಸಂಖ್ಯಾತರ ಮದುವೆ-ಶುಭ ಸಮಾರಂಭಗಳ ಅನುಕೂಲಕ್ಕಾಗಿ 4 ಶಾದಿ ಮಹಲ್ ನಿರ್ಮಾಣಕ್ಕೆ ಮಂಜೂರು ನೀಡಿದೆ. ಸರ್ಕಾರ ಸದಾ ಜನಪರ ಆಡಳಿತದೊಂದಿಗೆ 2 ವರ್ಷವನ್ನು ಕಾಂಗ್ರೆಸ್ ಸರ್ಕಾರ ಪೂರೈಸುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ಕೆ.ಹೆಚ್ ಮುನಿಯಪ್ಪ ಅವರು ಜಿಲ್ಲಾ ಅಭಿವೃದ್ಧಿಗೆ ಶ್ರಮಿಸುತ್ತಿರುವುದನ್ನು, ಅವರು ಕಾರ್ಯಕ್ಕೆ ಹಾಗೂ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಿದ್ದಕ್ಕೆ ಸಿ.ಎಂ, ಡಿ.ಸಿ.ಎಂ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ‌ ಎಚ್ ಮುನಿಯಪ್ಪ‌ ಅವರು ಸರ್ಕಾರದ ಎರಡು ವರ್ಷದ ಸಾಧನೆಯನ್ನ ಮೊದಲ ಜಿಲ್ಲೆಯಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಕಾರ್ಯಕ್ರಮ ಮಾಡ್ತಿದ್ದೇವೆ. ಸಿಎಂ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದಾರೆ.

ತಡವಾದರೂ ಹತ್ತು ಕೆ.ಜಿ ಅಕ್ಕಿಯನ್ನ ವಿತರಿಸಿದ್ದಾರೆ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಶಸ್ವಿಯಾಗಿ ಜಾರಿಗೆ ಮಾಡಿದ್ದಾರೆ. ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಕೊಟ್ಟ ಮೇಲೆ ಕೆರೆಗಳ ತುಂಬಿಸುವ ಮಾತನ್ನು ನೀವು ಹೇಳಿದ್ರಿ. ಆದಷ್ಟು ಬೇಗನೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ಜಿಲ್ಲೆಯ ಕಟ್ಟ ಕಡೆಯ ಗ್ರಾಮಕ್ಕೂ ನೀರು ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಸಿಎಸ್‌ಆರ್ ಫಂಡ್ ಮೂಲಕ 150 ಕೋಟಿ ವೆಚ್ಚದಲ್ಲಿ ಶಾಲೆಗಳು ಅಭಿವೃದ್ಧಿ ಮಾಡ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2.50 ಲಕ್ಷ ಕುಟುಂಬಗಳಿಗೆ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ಕೊಡಿಸುವ ಮಹತ್ತರ ಉದ್ದೇಶ ಹೊಂದಿದ್ದು, ಮೊದಲ ಹಂತದಲ್ಲಿ 5 ಸಾವಿರ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಮೇಳದ ಮೂಲಕ ಕೆಲಸವನ್ನು ಕೊಡಿಸಿದ್ದೇವೆ ಎಂದು ಸಚಿವರು ಹೇಳಿದರು.

ಸರ್ಕಾರದ ಎರಡು ವರ್ಷಗಳ ಸಾಧನೆಯ ಸಾಧನೆ ಸಂಚಿಕೆ ಪುಸ್ತಕ ಬಿಡುಗಡೆಗೊಳಿಸಿ ವಿವಿಧ ಇಲಾಖೆಗಳ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ಸಣ್ಣ ನೀರಾವರಿ ಇಲಾಖೆ ಸಚಿವರಾದ ಬೋಸುರಾಜು, ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ನೆಲಮಂಗಲ ಶಾಸಕರಾದ ಶ್ರೀನಿವಾಸ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ರೇವಣ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿ.ಕೆ ಬಾಬಾ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!