Basava Jayanti celebrated with enthusiasm in Tubagere

ತೂಬಗೆರೆಯಲ್ಲಿ ಸಂಭ್ರಮದ ಬಸವ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹೋಬಳಿ ಘಟಕದ ವತಿಯಿಂದ ಬಸವ (Basavanna) ಜಯಂತಿ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಶ್ವಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಬಸವ ಜಯಂತಿಯನ್ನು ಆಚರಿಸಿದರು.  

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಾಸಭಾ ಜಿಲ್ಲಾ ಯುವ ಘಟಕದ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, 12 ನೇ ಯ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು. 

ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ ಬಸವಣ್ಣನವರು.
ಭಾರತ ಸಂವಿಧಾನವು ಬಸವಣ್ಣನವರ ಆಶಯಗಳಿಗೆ ಪೂರಕವಾಗಿದೆ ಆದ್ದರಿಂದ ಬಸವಣ್ಣನನ್ನು ಸರ್ಕಾರ ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ.

ಈ ಮೇರು ವ್ಯಕ್ತಿಯ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಹಾಗೂ ಇಂದು ದೇಶದ ಸಂಸತ್ ಭವನದಲ್ಲಿ ಪ್ರಥಮಬಾರಿಗೆ ಬಸವ ಜಯಂತಿ ಆಚರಣೆ ನಡೆಯುತ್ತಿರುವುದು ಇಡೀ ರಾಜ್ಯದ ಗೌರವ ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್ ಮಾತಾನಾಡಿ, ಬಸವ ಜಯಂತಿಯನ್ನು ನಮ್ಮ ಭಾಗದ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡಿ ಆಚರಿಸುತ್ತಾರೆ ಎಂದರು.

ವಾದ್ಯ -ಮೇಳದೊಂದಿಗೆ ಆರತಿ ಗಳನ್ನು ಹಿಡಿದ ಹೆಂಗಸರು, ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರಗೆ ಸ್ವಾಮಿ ಅರ್ಪಿಸಿದರು.

ನೂರಾರು ಭಕ್ತರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬಸವ ಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜಿಸಿ ಭಕ್ತಿಭಾವ ಮೆರೆದರು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ ನಡೆಯಿತು.

ವಿಶೇಷ ಪೂಜಾ ಕಾರ್ಯಕ್ರಮಗಳು ನಂತರ  ಸಂಜೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಯಿತು ವೀರಗಾಸೆ ಸೇರಿದಂತೆ ಅನೇಕ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ, ಕೆಪಿಸಿಸಿ ಸದಸ್ಯ ಎಸ್ ಆರ್ ಮುನಿರಾಜು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ವಕೀಲರಾದ ಪ್ರತಾಪ್, ಮುಖಂಡರಾದ ವೆಂಕಟೇಶ್, ಜಗನ್ನಾಥ, ಕನಕದಾಸ, ನಾರಾಯಣಪ್ಪ, ಮುರುಳಿ, ರವಿಸಿದ್ದಪ್ಪ, ಕಸಾಪ ಅಧ್ಯಕ್ಷ ಕುಮಾರ್, ನಿವೃತ್ತ ಯೋಧ ಗೋಪಾಲ್, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಜಗದೀಶ್ ಮತ್ತಿತರರು ಹಾಜರಿದ್ದರು.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!