ಇದ್ಯಾರು ನಾನು ಡಿಕೆ ಸುರೇಶ್ ಹೆಂಡತಿ ಅಂತಾವ್ರೆ..! ಬಿತ್ತು ಕೇಸ್| Video ನೋಡಿ

Who is these telling I am DK Suresh's wife..!

ರಾಮನಗರ: ನಾನು ಡಿ.ಕೆ ಸುರೇಶ್ ತಂಗಿ ಅಂತ ಹೇಳಿಕೊಂಡು ಐಶ್ವರ್ಯಾ ಗೌಡ (Aishwarya Gowda) ಎಂಬಾಕೆ ಕೋಟಿ ಕೋಟಿ ವಂಚಿಸಿರುವ ಬೆನ್ನಲ್ಲೇ, ಮಹಿಳೆಯೋರ್ವರು ನಾನು ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರ ಪತ್ನಿ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದರ ನಡುವೆ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪವಿತ್ರಾ ಎನ್ನುವವರು ಏಪ್ರಿಲ್ 8 ರಂದು ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿರುವ ಮಹಿಳೆ, ಈ ವಿಡಿಯೋದಲ್ಲಿ ನಾನು ಮೊದಲು ಡಿಕೆ ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ.

ಯಾಕೆಂದರೆ ಅವರು ಮೂರು ಬಾರಿ ಎಂಪಿ ಆಗಿ ಯಾರೂ ಮಾಡಲು ಆಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹವರನ್ನು ನಾನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ.

ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ. ಆದರೆ ನಾನು ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನನ್ನು ಪ್ರಶ್ನೆ ಮಾಡುತ್ತಾರೆ. ನೀವು ಡಿಕೆ ಸುರೇಶ್ ಅವರ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ. ಜನರಿಗೆ ಸ್ಟೇಟಸ್ ಬೇಕು. ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋದಲ್ಲಿ ಆಕೆ ಹೇಳಿಕೊಂಡಿದ್ದಾಳೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಡಿಕೆ ಸುರೇಶ್ (DK Suresh) ಅವರ ವಕೀಲರಾದ ಪ್ರದೀಪ್ ಎಂಬುವವರು ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮಹಿಳೆ ಡಿಕೆ ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾಳೆ. ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ. (ವೈರಲ್ ವಿಡಿಯೋ ಬಳಸಲಾಗಿದೆ)

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]