ದೊಡ್ಡಬಳ್ಳಾಪುರ: ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಿಂದೂಪುರ – ಬೆಂಗಳೂರು ನಡುವಿನ ಮಾಕಳಿ ಬಳಿ ಸಂಭವಿಸಿದೆ.
ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ವೆಂಕಟಪ್ಪಗಾರಿ ಬಾಲಚಂದ್ರ ( 32 ವರ್ಷ) ಎಂದು ಗುರುತಿಸಲಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಚಂದ್ರ ಅವರಿಗೆ ತಲೆ, ಎದೆ ಮತ್ತು ಕಾಲಿಗೆ ಗಂಭೀರವಾಗಿ ಗಾಯಗಳಾಗಿದ್ದು, ತುರ್ತು ನಿಗಾಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಹಲಸಿನ ಹಣ್ಣು ತಂದ ಆಪತ್ತು.. ಬಾಲಕನ ದುರ್ಮರಣ
ಘಟನೆಯಲ್ಲಿ ಕಾರು ಕೂಡ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.