ಬೆಂಗಳೂರು: ಶಾಸಕ ಶಿವಾನಂದ ಪಾಟೀಲ್ (Shivananda Patil) ಅವರು ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿರುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲ್ ನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ.
ತನ್ನ ವಿರುದ್ದ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಸನಗೌಡ ಪಾಟೀಲ್ ಪಂಥಾಹ್ವಾನ ನೀಡಿದ್ದರು. ಈಗ ಶಿವಾನಂದ ಪಾಟೀಲ್ ಅವರು ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿದ್ದು, ಬಸನಗೌಡ ಪಾಟೀಲ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಆದರೆ ಬಸನಗೌಡ ಆರ್. ಪಾಟೀಲ್ ಯತ್ನಾಳ್ ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.