ವಿಜಯಪುರ: ಬಸವನ ಬಾಗೇವಾಡಿ ಕ್ಷೇತ್ರದ ಶಕಾಸ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧ ಚುನಾವಣೆ ಎದುರಿಸುವಂತೆ ಸವಾಲು ಹಾಕಿದ್ದ ಬಸನ ಗೌಡ ಪಾಟೀಲ್ ಯತ್ನಾಳ್ ರಿಗೆ (Basana Gowda Patil Yatnal) ಉತ್ತರವಾಗಿ ಷರತ್ತುಬದ್ಧ ರಾಜೀನಾಮೆ ಸಲ್ಲಿಸಿರುವ ಸಚಿವ ಶಿವಾನಂದ ಪಾಟೀಲ್ (Shivananda Patil) ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಶಾಸಕ ಶಿವಾನಂದ ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ್ ಹಾಕಿದ ಸವಾಲು ಸ್ವೀಕರಿಸಿದ್ದೇನೆ. ಅದರಂತೆ, ವಿಧಾನ ಸಭೆಯ ಸಭಾಧ್ಯಕ್ಷರಿಗೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ.
ಇದೊಂದು ಸತ್ವ ಪರೀಕ್ಷೆ ಆಗಿಯೇ ಬಿಡಲಿ!
ಇದು ಕೇವಲ ನನ್ನ ಅಸ್ತಿತ್ವದ ಪ್ರಶ್ನೆಯಲ್ಲ. ನಮ್ಮ ಬಸವನ ಬಾಗೇವಾಡಿ ಮತಕ್ಷೇತ್ರದ ಮಹಾಜನತೆಯ ಸ್ವಾಭಿಮಾನದ ಪ್ರಶ್ನೆ. ನಾನು ಇವತ್ತು ಈ ನಿರ್ಧಾರ ಮಾಡಿರದಿದ್ದರೆ ಅದು ನನ್ನ ಮತದಾರರಿಗೆ ಮಾಡುವ ಅವಮಾನವಾಗುತ್ತಿತ್ತು!
ಹೀಗಾಗಿ ಯತ್ನಾಳ್ ಅವರು ಹಾಕಿದ ಸವಾಲು ಸ್ವೀಕರಿಸಿ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ.
ನೀವು ಯಾವಾಗ ರಾಜೀನಾಮೆ ಸಲ್ಲಿಸುತ್ತೀರಿ ಬಸನಗೌಡ ಪಾಟೀಲ್ ಯತ್ನಾಳ್ ಅವರೇ? ಎಂದು ಪ್ರತಿಸವಾಲು ಮಾಡಿದ್ದಾರೆ.
ಇನ್ನೂ ಶಾಸಕ ಶಿವಾನಂದ ಪಾಟೀಲ್ ಅವರ ಪ್ರತಿಸವಾಲಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು ಶಿವಾನಂದ ಪಾಟೀಲ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ರಾಜೀನಾಮೆಯನ್ನು ಎರಡು ಸಾಲಿನಲ್ಲಿ ಸಲ್ಲಿಸುತ್ತಾರೆ. ಯಾರಾದರೂ ಎಂದಾದರೂ ಈ ರೀತಿ ಷರತ್ತು ಹಾಕಿ ರಾಜೀನಾಮೆ ನೀಡುತ್ತಾರಾ..? ಈ ರೀತಿ ರಾಜೀನಾಮೆ ನೀಡುವುದು ಮೂರ್ಖತನವಾಗಿದೆ.
ಶಿವಾನಂದ ಪಾಟೀಲ್ ಗೆ ಮಾನ ಮರ್ಯಾದೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ, ಜೊತೆಗೆ ಈ ಕುರಿತು ತಮ್ಮ ನಿರ್ಧಾರವನ್ನು ಸದ್ಯದಲ್ಲೇ ತಿಳಿಸುವುದಾಗಿ ಯತ್ನಾಳ್ ಹೇಳಿದ್ದಾರೆ.