Honor to the SSLC toppers along with the student of Doddaballapur

ದೊಡ್ಡಬಳ್ಳಾಪುರದ ವಿದ್ಯಾರ್ಥಿನಿ ಸೇರಿ SSLC ಟಾಪರ್ಸ್ ಗೆ ಸನ್ಮಾನ

ಬೆಂ.ಗ್ರಾ.ಜಿಲ್ಲೆ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಐದು ವಿದ್ಯಾರ್ಥಿಗಳನ್ನು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನಿಸಿದರು.

ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಂತರ ಸಿಇಒ ಅವರು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿಯೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ, ಶಿಕ್ಷಕರ ಸಹಕಾರದಿಂದ ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಲು ಸಾಧ್ಯವಾಗಿದೆ.

ನಿಮ್ಮ ಈ ಸಾಧನೆಯು ಕಿರಿಯ ಸಹಪಾಠಿಗಳಿಗೂ ಮಾದರಿಯಾಗಲಿ. ಮುಂದಿನ ನಿಮ್ಮ ಉನ್ನತ ವಿದ್ಯಾಭ್ಯಾಸದಲ್ಲಿ ಕೂಡ ಇದೇ ರೀತಿಯ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ, ಪೋಷಕರಿಗೆ ಒಳ್ಳೆಯ ಹೆಸರು ತರಬೇಕು. ಜೀವನದಲ್ಲಿ ಉತ್ತಮ ಗುರಿ ಅಳವಡಿಸಿಕೊಂಡು ಮುನ್ನಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಐವರು ವಿದ್ಯಾರ್ಥಿಗಳಿಗೆ ಸನ್ಮಾನ

ರಾಜ್ಯದ 22 ಟಾಪರ್ಸ್ ಗಳ ಪೈಕಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಾದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ ಭಾವನಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಕ್ರಾಸ್ ನ ಎಸ್.ಜೆ.ಸಿ.ಅರ್ ಪ್ರೌಢಶಾಲೆಯ ರಂಜಿತ ಎ.ಸಿ ಅವರು 625 ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯದ ಟಾಪರ್ ಗಳಲ್ಲಿ ಕಾಣಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಐವರನ್ನು ಇಂದು ಸನ್ಮಾನಿಸಲಾಯಿತು.

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮೋಹನ್ ಜೆ.ಎಂ ಅವರು 625 ಕ್ಕೆ 623 ಅಂಕ, ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಐಶ್ವರ್ಯ 625 ಕ್ಕೆ 618 ಅಂಕ ಹಾಗೂ ನಿಶ್ಚಿತ ಆರ್ 625 ಕ್ಕೆ 617 ಅಂಕ ಪಡೆಯುವ ಮೂಲಕ ಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!