Good Morning News: 19 thousand teachers to be appointed soon..

ಗುಡ್ಮಾರ್ನಿಂಗ್ ನ್ಯೂಸ್: 19 ಸಾವಿರ ಶಿಕ್ಷಕರ ನೇಮಕ ಶೀಘ್ರ..

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ (Teachers) ಅಭಾವವಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಶಾಲೆಗಳಲ್ಲಿ ಕೆಲ ಮೂಲಸೌಕರ್ಯಗಳ ಅಭಾವವಿದ್ದು, ಹಂತ ಹಂತವಾಗಿ ಇದನ್ನು ಬಗೆಹರಿಸಲಾಗುವುದು. ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು.

ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊ ಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಒತ್ತಡಕ್ಕೆ ಮಣಿದು ಕೇಂದ್ರ ಸರಕಾರ ಜನ ಗಣತಿಯ ಜತೆ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿರುವುದು ಸ್ವಾಗತಾರ್ಹ. ಜಾತಿ ಗಣತಿ ನಡೆಸಲು ಬಿಜೆಪಿ ಸರಕಾರದ ಈ ನಿರ್ಧಾರವು ನಮ್ಮ ನಾಯಕ ರಾಹುಲ್ ಗಾಂಧಿಯವರ ಅಚಲ ಬದ್ಧತೆಗೆ ಸಾಕ್ಷಿಯಾಗಿದೆ.

ನಮ್ಮ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಮತ್ತು ಎಲ್ಲ ಹಿರಿಯ ಕಾಂಗ್ರೆಸ್ ನಾಯಕರ ಅವಿರತ ಪ್ರತಿಪಾದನೆಯಿಂದಾಗಿ ಅಂತಿಮವಾಗಿ 11 ವರ್ಷಗಳ ಬಳಿಕ ಈ ನಿರ್ಣಾಯಕ ವಿಷಯ ಮುನ್ನೆಲೆಗೆ ಬಂದಿದೆ.

ಈ ಗಣತಿಯು ದುರ್ಬಲ ವರ್ಗಗಳ ಸಬಲೀಕರಣ ಹಾಗೂ ವಿವಿಧ ಜಾತಿಗಳು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪಾರದರ್ಶಕವಾಗಿ ಪರಿಶೀಲಿಸಿ, ವ್ಯವಸ್ಥಿತವಾಗಿ ಅಸಮಾನತೆಗಳನ್ನು ಪರಿಹರಿಸಲು ಜಾತಿ ಜನಗಣತಿ ಮುಖ್ಯ. ಆಗ ಮಾತ್ರ ನಾವೆಲ್ಲರೂ ದುರ್ಬಲರನ್ನು ಮೇಲೆತ್ತುವ ಮತ್ತು ನಿಜವಾಗಿಯೂ ಸಮಾನತೆಯ ಸಮಾಜವನ್ನು ಸೃಷ್ಟಿಸುವ ಪರಿಣಾಮಕಾರಿ ನೀತಿಗಳನ್ನು ರೂಪಿಸಲು ಸಾಧ್ಯವಾಗುವುದು ಎಂದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!