ದೊಡ್ಡಬಳ್ಳಾಪುರ: ಇದೇ ತಿಂಗಳ 7 ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ (Sri Ghati Subrahmanya) ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವಂತೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ (Sri Nirmalanandanath Mahaswamiji) ಅವರಿಗೆ ಆಹ್ವಾನ ಪತ್ರಿಕೆ ನೀಡಿ, ಗೌರವಿಸಲಾಯಿತು.
ಈ ವೇಳೆ ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಪ್ರಧಾನ ಅರ್ಚಕರಾದ ಶ್ರೀನಿಧಿ, ಸುಬ್ರಹ್ಮಣ್ಯ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಹೇಮಲತಾ ರಮೇಶ್ ಹಾಗೂ ದೇವಾಲಯದ ಸಿಬ್ಬಂದಿ ಇದ್ದರು