ಒಳ‌ಮೀಸಲಾತಿ ಜಾರಿಗೆ ನಾವು ಬದ್ದ: ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

We are committed to implementing internal reservation: We have taken a significant step in this direction from today: Cmsiddaramaiah

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

“ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.

ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ.

2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು.

ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ.

ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025

19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.

ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.

ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.

ಮೊಬೈಲ್ ಆಪ್

ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು.

ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು (ಮೇ.8) ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121888"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]