SSLC ಫಲಿತಾಂಶ: ರಾಜ್ಯಕ್ಕೆ ರ್‍ಯಾಂಕ್ ಪಡೆದ ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

SSLC Results: Nalanda High School students from Doddaballapur felicitated for securing state rank

ದೊಡ್ಡಬಳ್ಳಾಪುರದ: 2024- 25 ನೇ ಸಾಲಿನ ಎಸ್ಎ‌ಸ್ಎಲ್‌ಸಿ (SSLC) ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್‍ಯಾಂಕ್ ಪಡೆದ ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆಯ (Nalanda High School) ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು.

ನಳಂದ ಪ್ರೌಢಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಎರಡನೇ ರ್‍ಯಾಂಕ್ ಪಡೆದ ಅಮೃತ ಎಂ.ಎಸ್(624/625), ಮೂರನೇ ರ್‍ಯಾಂಕ್ ಪಡೆದ ಗಾನವಿ ಎಸ್.ಎಂ(623/625) ಹಾಗೂ ಎಂಟನೇ ರ್‍ಯಾಂಕ್ ಪಡೆದ ಚಾರಿತ್ಯ.ಎಚ್ (618/625) ಮತ್ತು ದಿವ್ಯಶ್ರೀ.ವಿ (618/625) ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.

SSLC ಫಲಿತಾಂಶ: ರಾಜ್ಯಕ್ಕೆ ರ್‍ಯಾಂಕ್ ಪಡೆದ ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

ಈ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ಅನುರಾಧ ಕೆ.ಆರ್ ಮಾತನಾಡಿ, ನಮ್ಮ ಶಾಲೆಯ 07 ವಿದ್ಯಾರ್ಥಿಗಳು ರಾಜ್ಯಮಟ್ಟದ ಮೊದಲ 10 ರ್‍ಯಾಂಕ್‌ಗಳನ್ನು ಹಂಚಿಕೊಂಡಿದ್ದಾರೆ.

ಕೆಲವು ವಿದ್ಯಾರ್ಥಿಗಳು ಪುನರ್ ಮೌಲ್ಯಮಾಪನಕ್ಕೆ ಹಾಕಿಕೊಂಡಿದ್ದು ಮೊದಲ ರ್‍ಯಾಂಕ್ ಪಡೆಯುವ ನಿರೀಕ್ಷೆಯು ನಮ್ಮದಾಗಿದೆ. ನಮ್ಮ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆದಿದ್ದಾರೆ.

ದಾಖಲೆ ಮಟ್ಟದಲ್ಲಿ ಸುಮಾರು 61 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದು ಅವರ ಪ್ರತಿಭೆ ಅನಾವರಣಗೊಂಡಿದೆ. ನಮ್ಮ ರ್‍ಯಾಂಕ್ ವಿಜೇತ ಮಕ್ಕಳ ಅಧ್ಯಯನಶೀಲತೆ, ನಡೆ – ನುಡಿಗಳು ಇತರ ವಿದ್ಯಾರ್ಥಿಗಳಿಗೂ ಆದರ್ಶ ಪ್ರಾಯವಾಗಿದೆ ಎಂದರು.

ಹಾಗೆಯೇ ಮುಂದುವರೆದು “ಇದಕ್ಕೆ ಕಾರಣರಾದ ನಮ್ಮ ಶಿಕ್ಷಕ ವೃಂದದವರು ಅತ್ಯಂತ ಪರಿಶ್ರಮದಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಅಹರ್ನಿಶಿ ಶ್ರಮಿಸುತ್ತಿದ್ದರು.

ಇಡೀ ವರ್ಷ ವಿಶೇಷ ತರಗತಿಗಳನ್ನು ನಡೆಸಿ ವಿದ್ಯಾರ್ಥಿಗಳನ್ನು ಅಧ್ಯಯನಶೀಲರನ್ನಾಗಿ ರೂಪಿಸಿದರು. ಹಾಗೆಯೇ ಪೋಷಕರು ಕೂಡ ಸಹಕರಿಸಿ ಈ ವರ್ಷದ ಉತ್ತಮ ಫಲಿತಾಂಶಕ್ಕೆ ಕಾರಣರಾದರು ಎಂದು ತಿಳಿಸಿದರು.

ಎಲ್ಲಾ ವಿದ್ಯಾರ್ಥಿಗಳು ಇದೇ ರೀತಿ ಮುಂದೆಯೂ ಅಧ್ಯಯನಶೀಲರಾಗಿ ಸಮಾಜವನ್ನು ಉತ್ತಮವಾಗಿ ಮುನ್ನಡೆಸುವ ಹಾಗೂ ಸಮಾಜಕ್ಕೆ ಬೆಳಕನ್ನು ನೀಡುವ ವ್ಯಕ್ತಿಗಳಾಗಲಿ ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್ ರವರು ಹಾರೈಸಿದರು.

ಇದನ್ನೂ ಓದಿ; SSLC ಫಲಿತಾಂಶ: ದೊಡ್ಡಬಳ್ಳಾಪುರದ ನಳಂದಾ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆಯ ವರದಿ ಇಲ್ಲಿದೆ

ಸಭೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಸುನೀತಾ ಪಿ, ಅನಿತಾ ಕೆ ಪಿ, ಎಲ್ಲಾ ಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]