There can be no compromise on national security: Cmsiddaramaiah

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದ್ದಾರೆ.

ಅವರು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ.

ಆಪರೇಷನ್ ಸಿಂಧೂರ (Operation Sindoora) ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.

ಕಾಶ್ಮೀರದ ಪಹಲ್ಗಾಂವ್ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ.

ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ.

ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ.

ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ.

ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್.

ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ.

ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!