ಘಾಟಿ ಕ್ಷೇತ್ರದಲ್ಲಿ ಹಲಸು ಮೇಳ.. ಉತ್ತಮ ಸ್ಪಂದನೆ

Jackfruit fair in Ghati area.. good response

ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ (Ghati Subrahmanya) ಕ್ಷೇತ್ರದಲ್ಲಿ ನಡೆದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್‍ಯಕ್ರಮದ ಹಿನ್ನಲೆಯಲ್ಲಿ, ವಿವಾಹ ಕಾರ್‍ಯಕ್ರಮದ ವೇದಿಕೆ ಮುಂಭಾಗ ತಾಲೂಕಿನ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳಿಂದ ಆಯೋಜಿಸಿದ್ದ ಹಲಸು ಮೇಳಕ್ಕೆ (Jackfruit fair) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಲೂಕಿನ ಕಸಬಾ ಹಾಗೂ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳ, ಹಳದಿ ಬಣ್ಣದ ಹೆಬ್ಬಲಸು, ಬೇರು ಹಲಸು, ಕೆಂಪು ತೊಳೆಯ ಚಂದ್ರಹಲಸು ಮೊದಲಾದ ಹಲಸಿನ ತಳಿಗಳ ಮಾರಾಟ ನಡೆಯಿತು.

ಘಾಟಿ ಕ್ಷೇತ್ರದಲ್ಲಿ ಹಲಸು ಮೇಳ.. ಉತ್ತಮ ಸ್ಪಂದನೆ

ವಿವಾಹ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯ ಹಾಗೂ ಆಹಾರ ಹಾಗೂ ಜಿ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಮೊದಲಾದ ಗಣ್ಯರು ಮಾರಾಟ ಮಳಿಗೆ ಬಳಿ ಆಗಮಿಸಿ, ಹಲಸಿನ ಹಣ್ಣುಗಳ ರುಚಿಯನ್ನು ಸವಿದು ಸಂತಸ ಪಟ್ಟರು.

ತೂಬಗೆರೆ ಪ್ರಾಂತ್ಯದ ಹಲಸಿನ ವಿಶೇಷತೆ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಇಲ್ಲಿನ ತಳಿಯ ಹಲಸುಗಳು ವಿಶೇಷ ರುಚಿಯಿವೆ. ರೈತರ ಈ ರೀತಿಯ ಹಲಸು ಮೇಳದ ಆಯೋಜನೆಯಿಂದ ಹೆಚ್ಚಿನ ಪ್ರಯೋಜನಗಳಿವೆ ಎಂದು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಲಸು ಮೇಳೆ ಆಯೋಜಿಸುವಂತೆ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳಿಗಳ ಮನವಿಗೆ ಸ್ಪಂಸಿರುವ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹಲಸು ಮೇಳ ನಡೆಸಲು ಅನುವು ಮಾಡಿಕೊಟ್ಟಿರುವುದು ಸಂತಸದ ವಿಚಾರ. ಮುಂದಿನ ದಿನಗಳಲ್ಲಿ ಹಿಂದೂಪುರ-ಬೆಂಗಳೂರು ರಸ್ತೆ ಬದಿ, ಹಾಗೂ ದೊಡ್ಡಬಳ್ಳಾಪುರ ನಗರದಲ್ಲಿ ಬೃಹತ್ ಹಲಸಿನ ಮೇಳ ನಡೆಸಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎನ್ನುತ್ತಾರೆ ಹಲಸು ಮಾರಾಟಗಾರ ಮಂಜುನಾಥ್.

ಈ ಸಂದರ್ಭದಲ್ಲಿ ಹಲಸು ಬೆಳೆಗಾರ ಜಿ.ರಾಜಶೇಖರ್ ಹಾಗೂ ತೂಬಗೆರೆ ಭಾಗದ ಹಲಸು ಬೆಳೆಗಾರರು ಇದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]