ದೆಹಲಿ: ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಬುಧವಾರ ಮುಂಜಾನೆ ನಡೆಸಿದ ಆಪರೇಷನ್ ಸಿಂಧೂರ (Operation Sindoora) ಕ್ಷಿಪಣಿ ದಾಳಿಯನ್ನು ಇಸ್ರೇಲ್ (Israel) ಬೆಂಬಲಿಸಿದೆ.
ಈ ಕುರಿತು ಎಕ್ ನಲ್ಲಿ ಪೋಸ್ಟ್ ಮಾಡಿರುವ ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೇನ್ ಅಜರ್, ಮುಗ್ಧರ ಮೇಲೆ ಹೀನ ಕೃತ್ಯ ಎಸಗಿದವರಿಗೆ ಅಡಗಿಕೊಳ್ಳಲು ಎಲ್ಲಿಯೂ ಜಾಗವಿಲ್ಲ ಎಂಬುದನ್ನು ಭಯೋತ್ಪಾದಕರು ಗಮದಲ್ಲಿಟ್ಟುಕೊಳ್ಳ ಬೇಕು.
ಭಯೋತ್ಪಾದಕರ ನಿಗ್ರಹಕ್ಕೆ ಭಾರತ ಕೈಗೊಂಡಿರುವ ಆತ್ಮರಕ್ಷಣೆಯ ಕ್ರಮವನ್ನು ಇಸ್ರೇಲ್ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.