SSLC ಫಲಿತಾಂಶ; ದೊಡ್ಡಬಳ್ಳಾಪುರ ತಾಲೂಕಿನ ಕಳಪೆ ಸಾಧನೆ‌‌‌.. ಸರ್ಕಾರಿ ಶಾಲೆಗಳ ಫಲಿತಾಂಶ ತೀವ್ರ ಕುಸಿತಕ್ಕೆ ಹೊಣೆ ಯಾರು..?

SSLC Result; Poor performance of Doddaballapur taluk

ದೊಡ್ಡಬಳ್ಳಾಪುರ: ಮೇ 02 ರಂದು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಆದರೆ ದೊಡ್ಡಬಳ್ಳಾಪುರ ತಾಲೂಕು ಶೇ.70.08 ಫಲಿತಾಂಶ ಪಡೆಯುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲೂಕುಗಳಿಗೆ ಹೋಲಿಸಿದರೆ ಕೊನೆ ಸ್ಥಾನಕ್ಕೆ ತಲುಪುವ ಮೂಲಕ ಕಳಪೆ ಸಾಧನೆ ಮಾಡಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3654 ವಿದ್ಯಾರ್ಥಿಗಳು 2024-25 ನೇ ಸಾಲಿನ ಪರೀಕ್ಷೆಗೆ ಹಾಜರಾಗಿದ್ದು 2561 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 70.08 ರಷ್ಟು ಫಲಿತಾಂಶ ಪಡೆದಿದ್ದಾರೆ.

ಉಳಿದಂತೆ ಮೊದಲ ಸ್ಥಾನವನ್ನು ದೇವನಹಳ್ಳಿ ತಾಲ್ಲೂಕು ಪಡೆದಿದ್ದು, ಇಲ್ಲಿ 3255 ವಿದ್ಯಾರ್ಥಿಗಳು ಹಾಜರಾಗಿದ್ದು 2550 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 78.34 ರಷ್ಟು ಫಲಿತಾಂಶ ಪಡೆದಿದ್ದಾರೆ.

ಎರಡನೇ ಸ್ಥಾನವನ್ನು ನೆಲಮಂಗಲ ತಾಲ್ಲೂಕು ಪಡೆದಿದ್ದು , ಇಲ್ಲಿ 3109 ವಿದ್ಯಾರ್ಥಿಗಳು ಹಾಜರಾಗಿದ್ದು 2300 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 73.97 ರಷ್ಟು ಫಲಿತಾಂಶ ಪಡೆದಿದ್ದಾರೆ.

ಮೂರನೇ ಸ್ಥಾನವನ್ನು ಹೊಸಕೋಟೆ ತಾಲ್ಲೂಕು ಪಡೆದಿದ್ದು, ಇಲ್ಲಿ 3625 ವಿದ್ಯಾರ್ಥಿಗಳು ಹಾಜರಾಗಿದ್ದು 2646 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 72.99 ರಷ್ಟು ಫಲಿತಾಂಶ ಪಡೆದಿದ್ದಾರೆ.

ದೊಡ್ಡಬಳ್ಳಾಪುರಕ್ಕೆ ಕೊನೆ ಸ್ಥಾನ.. ಸರ್ಕಾರಿ ಶಾಲೆಯ ಫಲಿತಾಂಶ ತೀವ್ರ ಕುಸಿತ

ಕಳೆದ ವರ್ಷ 2023-24 ನೇ ಸಾಲಿನಲ್ಲಿ ಎರಡನೇ ಸ್ಥಾನ ಪಡೆದಿದ್ದ ದೊಡ್ಡಬಳ್ಳಾಪುರ ತಾಲೂಕು ಈ ವರ್ಷ ಕಳೆಪೆ ಸಾಧನೆ ಮಾಡಿದೆ.. ಅದರಲ್ಲಿಯೂ ಸರ್ಕಾರಿ ಮತ್ತು ಅನುದಾನಿತ ಶಾಲೆಯಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಅತಿ ಹೆಚ್ಚು ಅನುತೀರ್ಣರಾಗಿದ್ದಾರೆ.

ಶಿಕ್ಷಣ ಇಲಾಖೆ ಮಾಹಿತಿ ಅನ್ವಯ ದೊಡ್ಡಬಳ್ಳಾಪುರ ತಾಲೂಕಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಪರೀಕ್ಷೆ ಬರೆದ 2171 ಮಕ್ಕಳ ಪೈಕಿ ಬರೋಬ್ಬರಿ 886 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.

ಇವರಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ 1463 ಮಕ್ಕಳ ಪೈಕಿ 509 ವಿದ್ಯಾರ್ಥಿಗಳು ಅನುತೀರ್ಣರಾಗುವ ಮೂಲಕ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗಕ್ಕೆ ಮಕ್ಕಳನ್ನು ಕಳಿಸುತ್ತಿರುವ ಪೋಷಕರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಹೊಣೆ ಯಾರು..?

SSLC ಫಲಿತಾಂಶದಲ್ಲಿ ಎರಡನೇ ಸ್ಥಾನದಿಂದ ಕೊನೆಯ ಸ್ಥಾನಕ್ಕೆ ದೊಡ್ಡಬಳ್ಳಾಪುರ ತಾಲೂಕು ಕುಸಿಯಲು ಕಾರಣ ಏನು..? ಇದರ ಹೊಣೆ ಯಾರು ಹೊರಬೇಕಾದವರು ಯಾರು..? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ (ಕೆಲವೆಡೆ ಶಿಕ್ಷಕರು ಇದ್ದಾಗಿಯೂ ಫಲಿತಾಂಶ ಕುಸಿತ), ಕೆಲ ಶಾಲೆಗಳಲ್ಲಿ ಶಿಕ್ಷಕರ ಬೇಜವಬ್ದಾರಿ, ಗ್ರಾಮೀಣ ಪೋಷಕರು ಅಸಡ್ಡೆಯಿಂದಾಗಿ ಮಕ್ಕಳ ಮಿತಿ ಮೀರಿದ ಮೊಬೈಲ್ ಬಳಕೆ ಈ ರೀತಿಯ ಕಳಪೆ ಫಲಿತಾಂಶಕ್ಕೆ ಕಾರಣ ಎನ್ನಲಾಗುತ್ತಿದೆ.

ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣ ಮಟ್ಟ ತೀವ್ರ ಕುಸಿತ ಈ ರೀತಿ ಫಲಿತಾಂಶಕ್ಕೂ ಕಾರಣ ಎನ್ನಬಹುದು, ಅಗತ್ಯ ಶಿಕ್ಷಕರನ್ನು ನೇಮಿಸದೆ, ಕಡಿಮೆ ಸಂಬಳಕ್ಕೆ ಅತಿಥಿ ಶಿಕ್ಷಕರನ್ನು ಅವಲಂಬಿಸಿದರೆ ಫಲಿತಾಂಶ ಉತ್ತಮವಾಗುವುದಾದರೂ ಹೇಗೆ..?

8ನೇ ತರಗತಿಗೆ ದಾಖಲಾಗುವ ಅನೇಕ ಮಕ್ಕಳಿಗೆ ಕನ್ನಡ, ಇಂಗ್ಲಿಷ್ ಅಕ್ಷರಗಳ ಬಗ್ಗೆ ಅರಿವೇ ಇರುವುದಿಲ್ಲ ಎಂಬುದು ಅನೇಕ ಪ್ರೌಢಶಾಲೆ ಶಿಕ್ಷಕರ ಆರೋಪ, ಹಾಗಾದರೆ ಪ್ರಾಥಮಿಕ ಶಾಲೆಗಳಲ್ಲಿ ದೊರಕುತ್ತಿರುವ ಶಿಕ್ಷಣದ ಗುಣಮಟ್ಟವನ್ನು ಪ್ರಶ್ನೆ ಮಾಡಬೇಕಾದವರು ಯಾರು..?

ಇನ್ನೂ ಶಿಕ್ಷಣ ಇಲಾಖೆ ಜವಬ್ದಾರಿ ಹೊರದೆ, ಸೂಕ್ತ ಸಮಯದಲ್ಲಿ ಅಗತ್ಯ ತರಬೇತಿ ಆಯೋಜನೆ ಮಾಡದೇ ಇರುವುದು, ಶಿಕ್ಷಕರ ನೇಮಕ ಮಾಡದೆ ಡೆಪ್ಟೇಷನ್ ಮಾಡಿ ಕೈತೊಳೆದುಕೊಂಡಿರುವುದು, ತಾಲೂಕಿನ ಮಕ್ಕಳಿಗ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಕಾಳಜಿ ತೋರದೆ, ಶಿಕ್ಷಕರ ಕಟ್ಟು ನಿಟ್ಟಿನ ಸೂಚನೆ ನೀಡದೇ ಇರುವುದು ಕೂಡ ಈ ರೀತಿಯ ಕಳಪೆ ಫಲಿತಾಂಶಕ್ಕೆ ಕಾರಣ ಎನ್ನಲಾಗಿದೆ.

ರಾಜ್ಯಕ್ಕೆ ಟಾಪರ್ಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಖಾಸಗಿ ಶಾಲೆಯ ವಿದ್ಯಾರ್ಥಿನಿ ಹೆಸರು ಬಂದಿರುವುದನ್ನೇ ಸಾಧನೆ ಎಂಬಂತೆ ಬಿಂಬಿಸುವ ವ್ಯವಸ್ಥೆ, ಉಳಿದ 886 ಮಕ್ಕಳು ಅನುತೀರ್ಣ ಆಗಿರುವುದಕ್ಕೆ ಕಾರಣ ಏನು..? ಎಂಬುದು ಚರ್ಚೆಯಾಗದೆ ಉಳಿದಿರುವುದು ವಿಪರ್ಯಾಸ.

ಕೆಲ ಶಾಲೆಗಳಲ್ಲಿ ಅನೇಕ ಮಕ್ಕಳು ಎಲ್ಲಾ ಸಬ್ಜೆಕ್ಟ್ ಗಳಲ್ಲಿಯೂ ಅನುತ್ತೀರ್ಣರಾಗಿದ್ದಾರೆ. ಇದಕ್ಕೆ ಹೊಣೆ ಹೊರಬೇಕಾದವರು ಯಾರು..? ಫಲಿತಾಂಶ ಬಂದು 6 ದಿನ ಕಳೆದರು ಮುಖ್ಯ ಶಿಕ್ಷಕರ ಸಭೆ ಕರೆದು, ಲೋಪ ಎಲ್ಲಾಗಿದೆ, ಮುಂದೆ ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದರ ಬಗ್ಗೆ ಸಭೆಯೇ ನಡೆದಿಲ್ಲ ಎನ್ನಲಾಗುತ್ತಿದೆ. ಈ ರೀತಿ ಆದರ ಸರ್ಕಾರಿ ಶಾಲೆಗಳ ಬಗ್ಗೆ ಭರವಸೆ ಉಳಿಯುವುದಾದರೂ ಹೇಗೆ..? ಎಂಬ ಪ್ರಶ್ನೆ ದೊಡ್ಡಬಳ್ಳಾಪುರ ತಾಲೂಕಿನ ಜನರದ್ದಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]