Tension at the border: Strict action against those spreading fake news

ಗಡಿಯಲ್ಲಿ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ, ಮಾಧ್ಯಮಗಳಿಗೂ ಸಲಹೆ

ಬೆಂಗಳೂರು: ಭಾರತ-ಪಾಕಿಸ್ತಾನ ಗಡಿ ಯಲ್ಲಿ ಉದ್ವಿಗ್ನ ವಾತಾವರಣ ತೀವ್ರ ಗೊಂಡಿದ್ದು, ಪೆಹಲಾಮ್‌ನಲ್ಲಿ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂದೂರ (Operation Sindoor) ಮೂಲಕ ತಕ್ಕ ಉತ್ತರ ನೀಡಲಾಗಿದೆ.

ಈ ಬೆಳವಣಿಗೆಯಿಂದ ಎರಡು ದೇಶಗಳ ನಡುವೆ ಯುದ್ದದ ಭೀತಿ ಎದುರಾಗಿದೆ. ಈ ಸಂದರ್ಭದಲ್ಲಿ ಕರ್ನಾಟ ಕದಲ್ಲೂ ರಾಜ್ಯ ಪೊಲೀಸ್ ಇಲಾಖೆ ಎಚ್ಚರಿಕೆಯಿಂದ ಕಾರ್ಯನಿರ್ವ ಹಿಸುತ್ತಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಕಟ್ಟುನಿಟ್ಟಿನ ಭದ್ರತಾ ಕ್ರಮಗಳು: ನಗರದ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಆಯುಕ್ತ ದಯಾನಂದ್, ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.

ಗಡಿಯಲ್ಲಿ ಅಗತ್ಯ ಸಾಮಗ್ರಿಗಳ ಶೇಖರಣೆ ನಡೆಯುತ್ತಿದೆ ಎಂಬ ವರದಿಗಳು ಬಂದಿವೆ. ಈ ಕಾರಣಕ್ಕೆ ಎಲ್ಲೆಡೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜನರಲ್ಲಿ ಆತಂಕ ಮೂಡ ದಂತೆ ಪೊಲೀಸರು ಸಾರ್ವ ಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು ಮತ್ತು ಸುಳ್ಳು ಸುದ್ದಿ ಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಸಿಬ್ಬಂದಿಗೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸ ಲಾಗಿದ್ದು, ಬೆಂಗಳೂರಿನಲ್ಲಿ ಡಿಸಿಪಿಗಳು ಮತ್ತು ಎಸಿಪಿಗಳು ನಿಗಾ ವಹಿಸಬೇಕು.

ಕೇಂದ್ರ ಮತ್ತು ರಾಜ್ಯ ಸರಕಾರದ ಸೂಚನೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನರಿಗೆ ಮಾಕ್ ಡ್ರಿಲ್ ಬಗ್ಗೆ ಅರಿವು ಮೂಡಿಸುವ ಕೆಲಸವನ್ನೂ ಪೊಲೀಸರು ಮಾಡಬೇಕು ಎಂದು ದಯಾನಂದ್‌ ತಿಳಿಸಿದರು.

ಮಾಧ್ಯಮಗಳಿಗೂ ಸಲಹೆ

ಇನ್ನೂ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ಭವಿಸಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳು ಮತ್ತು ಇತರ ಮಾಧ್ಯಮಗಳ ಮೂಲಕ ನಕಲಿ ಸುದ್ದಿ ಹಾಗೂ ತಪ್ಪು ಮಾಹಿತಿಗಳ ಪ್ರಸರಣದ ಸಾಧ್ಯತೆಯು ಹೆಚ್ಚಾಗಿರುತ್ತದೆ.

ಇಂತಹ ಮಾಹಿತಿಗಳು ಸಾರ್ವಜನಿಕರಲ್ಲಿ ವಿನಾ ಕಾರಣ ಆತಂಕ ಮಾಡಬಹುದು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಶಾಂತಿಗೆ ಗಂಭೀರ ಹಾನಿ ಮಾಡಬಹುದು.

ಎಲ್ಲಾ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಸಂಪಾದಕರು ಮತ್ತು ವಿಷಯ ಸೃಷ್ಟಿಕರ್ತರು ಪರಿಶೀಲನೆ ಇಲ್ಲದ ವರದಿಗಳು, ಚಿತ್ರಗಳು ಅಥವಾ ವಿಡಿಯೋಗಳನ್ನು ಬಳಸಿ ವರದಿ ಮಾಡುವಾಗ ಅತ್ಯಂತ ಜವಾಬ್ದಾರಿಯುತ ಮತ್ತು ಎಚ್ಚರಿಕೆಯಿಂದ ಕೆಳಕಂಡ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ.

1) ಸಂಪೂರ್ಣವಾಗಿ ಪರಿಶೀಲಿಸಿ: ಯಾವುದೇ ಮಾಹಿತಿ ನಂಬಲಾರ್ಹವಲ್ಲದ ಮೂಲಗಳಿಂದ ಮಾಹಿತಿ ಬಂದಿದ್ದರೆ ಅಥವಾ ದೃಢಪಡಿಸದಿದ್ದರೆ ಅದನ್ನು ಪ್ರಕಟಿಸಬೇಡಿ.

2) ನಂಬಲಾರ್ಹ ತತ್ವಪಾಲನಾ ಸಾಧನಗಳನ್ನು ಉಪಯೋಗಿಸಿ: (Official Fact Check Tools): PIB ಪ್ಯಾಕ್ಟ್ ಚೆಕ್ , Alt News, BOOM, Factly, Snopes & AFP Fact Check ಮುಂತಾದ ಅಧಿಕೃತ ತಾಣಗಳನ್ನು ಪರಿಶೀಲನೆಗಾಗಿ ಉಪಯೋಗಿಸಿ. ಮಾಹಿತಿಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳಿ.

3) ಸಂವೇದನಾಶೀಲ ಮತ್ತು ಉಪ್ಪೇಕ್ಷಣೀಯ ಅಥವಾ ಭಯ ಹುಟ್ಟಿಸುವ ಶೈಲಿ ತಪ್ಪಿಸಿ: ಪೋಸ್ಟ್ ಅಥವಾ ವರದಿಗಳನ್ನು ನಯಗೊಳಿಸಿ ಅಥವಾ ಉತ್ಕೃಷ್ಟಗೊಳಿಸಿ, ಭಯ ಉಂಟು ಮಾಡಬೇಡಿ.

4) ತಪ್ಪು ಮಾಹಿತಿ ನೀಡಿದ್ದರೆ ತಕ್ಷಣ ಸರಿಪಡಿಸಿ: ಅಜಾಗರೂಕತೆಯಿಂದ ತಪ್ಪು ಮಾಹಿತಿ ಹಂಚಲಾಗಿದ್ದರೆ, ಕೂಡಲೇ ತಪ್ಪು ಸರಿಪಡಿಸಿ ಮತ್ತು ತಪ್ಪಿನ ಬಗ್ಗೆ ಸ್ಪಷ್ಟನೆ ನೀಡಲು ಕ್ರಮ ಕೈಗೊಳ್ಳಿ.

5) ಕಾನೂನು ಹಾಗೂ ನೈತಿಕ ಮೌಲ್ಯಗಳನ್ನು ಪಾಲಿಸಿ: ಸಮುದಾಯ ಅಥವಾ ಅಂತಾರಾಷ್ಟ್ರೀಯ ವಿಷಯಗಳ ವರದಿಯಲ್ಲಿ ಪತ್ರಿಕೋದ್ಯಮದ ಮೌಲ್ಯ, ನೈತಿಕತೆ ಮತ್ತು ನಿಷ್ಪಕ್ಷಪಾತ ಮಾರ್ಗವನ್ನು ಕಾಯ್ದುಕೊಳ್ಳಿ.

ಈ ಸಂದರ್ಭದಲ್ಲಿ ಮಾಧ್ಯಮಗಳು ನಂಬಿಕೆಗೆ ಮತ್ತು ಜವಾಬ್ದಾರಿಗೆ ನಿಲುಕುವ ಆಧಾರಸ್ಥಂಬಗಳಾಗಬೇಕು. ದೃಢಪಡಿಸದ ಮಾಹಿತಿಗಳು ರಾಷ್ಟ್ರದ ಶಾಂತಿ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವಂತಾಗದಂತೆ ನಾವು ಎಚ್ಚರಿಕೆಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!