ದೊಡ್ಡಬಳ್ಳಾಪುರ JDS: ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕ ಸ್ಥಾನಗಳಿಗೆ ಮೇ 25ರಂದು ಚುನಾವಣೆ ನಿಗದಿಯಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Mune Gowda) ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲಿಯೇ ಸಭೆ ಕರೆಯಾಗುವುದು ಎಂದು ದೊಡ್ಡಬಳ್ಳಾಪುರ ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ (M. Lakshmipathaya) ಅವರು ಹೇಳಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಬಮೂಲ್ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ನಿರ್ದೇಶಕರ ಆಯ್ಕೆ ಕುರಿತು ಸಭೆ ನಡೆಸಲಾಗುತ್ತಿದ್ದು, ಈ ಸಭೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆಗೆ ಇಚ್ಚಿಸುವ ಆಕಾಂಕ್ಷಿಗಳು ಹೆಸರನ್ನು ನೀಡಬಹುದಾಗಿದೆ.
ಈ ಸಭೆಯಲ್ಲಿ ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅಭ್ಯರ್ಥಿಗಳ ಹೆಸರು ಸೂಚಿಸಬಹುದೆಂದು ಲಕ್ಷ್ಮೀಪತಯ್ಯ ಅವರು ಮನವಿ ಮಾಡಿದ್ದು, ಶೀಘ್ರದಲ್ಲೇ ಸಭೆಯ ದಿನಾಂಕ ತಿಳಿಸಲಾಗುವುದೆಂದು ಹೇಳಿದ್ದಾರೆ.