
ದೊಡ್ಡಬಳ್ಳಾಪುರ: ಇತಿಹಾಸ ಪ್ರಸಿದ್ಧ ಸಪ್ತಮಾತೃಕಾ ಮಾರಿಯಮ್ಮ ದೇವಿಯ (Saptha mathrukaa Mariamma Devi) ಕರಗ ಮಹೋತ್ಸವ ನಾಳೆ( 12-5-25)ರಾತ್ರಿ ನಡೆಯಲಿದೆ.

ಇದರ ಅಂಗವಾಗಿ ಇಂದು ಹಸಿ ಕರಗ ಮಹೋತ್ಸವ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಕರಗ ಹೊತ್ತ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.
ನಗರ ಠಾಣೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು
ಹಸಿ ಕರಗದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
(ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಬಳಸಲಾಗಿದೆ)


