Police parade rowdy sheeters in Doddaballapur

ದೊಡ್ಡಬಳ್ಳಾಪುರದಲ್ಲಿ ರೌಡಿ ಶೀಟರ್‌ಗಳಿಗೆ ಬೆವರಿಳಿಸಿದ ಪೊಲೀಸರು..!

ದೊಡ್ಡಬಳ್ಳಾಪುರ: ಬೇಸಿಗೆ ಬಿಸಿ, ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ (Police) ವರಿಷ್ಠಾಧಿಕಾರಿ (ಅಪರಾಧ ವಿಭಾಗ) ಕೆ.ಎಸ್.ನಾಗರಾಜ್ ಅವರ ಕಟ್ಟುನಿಟ್ಟಿನ ವಾರ್ನಿಂಗ್ ರೌಡಿ ಶೀಟರ್‌ಗಳ ಬೆವರಿಳಿಯುವಂತೆ ಮಾಡಿದ ಘಟನೆ ನಗರದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಭಾನುವಾರ ಕಂಡು ಬಂತು.

ಈ ವೇಳೆ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಅಪರಾಧ ವಿಭಾಗ) ಕೆ.ಎಸ್.ನಾಗರಾಜ್, ರೌಡಿ ಶೀಟರ್ಗಳು ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದರೆ ಗಡಿಪಾರು ಮಾಡುವುದು ಖಚಿತ ಎನ್ನುವ ಎಚ್ಚರಿಕೆ ನೀಡಿದರು.

ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಮತ್ತು ರೌಡಿಶೀಟರ್ಗಳು ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ರೌಡಿಶೀಟರ್ಗಳ ಪರೇಡ್ ನಡೆಸಿದರು.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ನಾಗರಾಜ್, ದೊಡ್ಡಬಳ್ಳಾಪುರ ಡಿವೈಎಸ್ಪಿ ವಿಭಾಗದ ವಿವಿಧ ಪೊಲೀಸ್ ಠಾಣೆಗಳಲ್ಲಿ 248 ರೌಡಿಶೀಟರ್ಗಳು ಇದ್ದಾರೆ. ಇದರಲ್ಲಿ ಭಾನುವಾರ ನಡೆದ ಪರೇಡ್ ನಲ್ಲಿ 118 ಜನ ಮಾತ್ರ ಹಾಜರಾಗಿದ್ದಾರೆ. ಕೆಲವರು ಅನಾರೋಗ್ಯ ಕಾರಣದಿಂದ ಬಂದಿಲ್ಲ, ಮತ್ತೆ ಕೆಲವರು ಜೈಲಿನಲ್ಲಿದ್ದಾರೆ. ಇದರಲ್ಲಿ 25 ಜನ ಕೊಲೆ ಆರೋಪಿಗಳಿದ್ದಾರೆ ಎಂದರು.

ಉದ್ದೇಶ ಪೂರ್ವಕವಾಗಿ ಕಾನೂನಿನ ಭಯವಿಲ್ಲದೇ ಜನಸಾಮಾನ್ಯರಿಗೆ ತೊಂದರೆ ನೀಡುವವರನ್ನು ರೌಡಿಪಟ್ಟಿಗೆ ಸೇರಿಸಲಾಗಿದೆ. ಕೆಲವರಿಗೆ ತಾನು ಮಾಡಿರುವ ತಪ್ಪು ಅರಿವಿಗೆ ಬಂದಿದ್ದು, ಮತ್ತೆ ಕೆಲವರಿಗೆ ಇನ್ನೂ ತಿಳುವಳಿಕೆ ಬರದೇ ಪುನರಾರ್ವತಿತವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಇಂತಹವರಿಗೆ ಮತ್ತಷ್ಟು ಕಾನೂನಿನ ಕಠಿಣ ಶಿಕ್ಷೆ ವಿಧಿಸಲಾಗುವುದು. ಗಡಿಪಾರು ಸಹ ಮಾಡಲಾಗುವುದು ಎಂದರು.

ರೌಡಿ ಶೀಟರ್ಗಳು ಯಾವುದೇ ಕಾರಣಕ್ಕೂ ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಇಂತಹ ಕೃತ್ಯಗಳಿಗೂ ಸಹ ಕುಮ್ಮಕ್ಕು ನೀಡಬಾರದು. ತಪ್ಪು ಮಾಡಿದ್ದು ಕಂಡುಬಂದರೆ ತಕ್ಕ ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಾರೇ ಶಿಫಾರಸ್ಸು ಮಾಡಿದರೂ ರೌಡಿ ಪಟ್ಟಿಯಿಂದ ಹೆಸರು ತೆಗೆಯುವುದಿಲ್ಲ

ರೌಡಿಶೀಟರ್ ಪಟ್ಟಿಯಲ್ಲಿ ಹೆಸರು ಸೇರಲು ಕೇವಲ ಒಂದು ಗಂಟೆ ಸಾಕು, ಆದರೆ ರೌಡಿ ಪಟ್ಟಿಯಿಂದ ಹೆಸರು ತೆಗೆಯುವುದಕ್ಕೆ ಹಲವು ವರ್ಷಗಳೇ ಬೇಕಾಗುತ್ತದೆ. ಆದ್ದರಿಂದ ಯಾರೂ ಸಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು.

ಯಾವ ಅಪರಾಧದಲ್ಲಿ ಭಾಗಿಯಾಗದೇ ಸನ್ನಡತೆಯಿಂದ ಜೀವನ ಸಾಗಿಸುತ್ತಿರುವ ಹಾಗೂ 60 ವರ್ಷ ಮೇಲ್ಪಟ್ಟವರ ರೌಡಿಶೀಟರ್ ಗಳ ಚಲನವಲನ ಗಮನಿಸಿ ರೌಡಿ ಪಟ್ಟಿಯಿಂದ ಹೆಸರು ತೆಗೆಯಲಾಗುವುದು ಎಂದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ರವಿ, ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ಗೌಡ, ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕಲ್ಲಪ್ಪ ಶಂಸಕರಪ್ಪ ಖರಾತ್ ಇದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!