ಗದಗ: ಬೀದಿ ನಾಯಿಗಳ (Street dogs) ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಪಟ್ಟಣದ ಚೋಳಿನವರ ಓಣಿಯ ನಿವಾಸಿ ಪ್ರೇಮಾ ಶರಣಪ್ಪ ಚೋಳಿನ (53 ವರ್ಷ) ಮೃತರು.
ಪ್ರೇಮಾ ಚೋಳಿನ ಮನೆ ಸಮೀಪ ಹೂ ಕೀಳುತ್ತಿದ್ದಾಗ ಬೀದಿ ನಾಯಿಗಳು ಸಾಮೂಹಿಕವಾಗಿ ದಾಳಿ ಮಾಡಿ, ನೆಲಕ್ಕೆ ಬೀಳಿಸಿ ಕಚ್ಚಿವೆ.
ಬೀದಿ ನಾಯಿಗಳ ದಾಳಿಯಿಂದ ಬಿದ್ದು ತೀವ್ರವಾಗಿ ಗಾಯ ಗೊಂಡಿದ್ದ ಪ್ರೇಮಾ ಚೋಳಿನ ಅವರನ್ನು ಸ್ಥಳೀಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತರಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೀದಿ ನಾಯಿಗಳ ದಾಳಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಪ್ರೇಮಾ ಚೋಳಿನ ಚಿಕಿತ್ಸೆ ಫಲಿಸದೆ ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರ ಜತೆಗೆ ಸ್ಥಳೀಯರು ಆಸ್ಪತ್ರೆ ಮುಂದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹವನ್ನು ಇಟ್ಟು ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸ್ಥಳೀಯ ಪುರಸಭೆ ವಿರುದ್ಧ ಆಕ್ರೋಶ ಹೊರ ಹಾಕಿದರು.
ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.