ದೊಡ್ಡಬಳ್ಳಾಪುರ: ಸರ್ಕಾರಿ ಆಸ್ಪತ್ರೆ ಡಿ ಗ್ರೂಪ್ ನೌಕರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡರುವ ಘಟನೆ ತಾಲೂಕಿನ ಕೊನಘಟ್ಟದಲ್ಲಿ ನಡೆದಿದೆ.
ಮೃತರನ್ನು 39 ವರ್ಷದ ಬಾಬು ಎಂದು ಗುರುತಿಸಲಾಗಿದೆ.
ಮೃತ ಬಾಬು ಕೊನಘಟ್ಟ ಸರ್ಕಾರಿ ಆಸ್ಪತ್ರೆ ಡಿ ಗ್ರೂಪ್ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ರಾತ್ರಿ ಕೊನಘಟ್ಟದ ಆಸ್ಪತ್ರೆ ಕ್ವಾಟ್ರಸ್ ಬಳಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.