ದೊಡ್ಡಬಳ್ಳಾಪುರ: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.
ಘಾಟಿ ದೇವಾಲಯ ಆಡಳಿತ ಮಂಡಳಿಯಿಂದ ವಿಶೇಷ ಪೂಜೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನಿಂದ ಬಂದ ಅವರನ್ನು ದೇವಾಲಯದ ವತಿಯಿಂದ ಸ್ವಾಗತ ಕೋರಲಾಯಿತು.
ಬಳಿಕ ರಾಷ್ಟ್ರೋತ್ಥಾನ ಗೋಶಾಲೆಗೂ ಕೂಡ ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ನೀಡಲಿದ್ದು, ಗೋಶಾಲೆಯಲ್ಲಿನ ಗೋವುಗಳನ್ನು ವೀಕ್ಷಿಸಿ, ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ.